ಬೆಳಗಾವಿ | ಮನೆ ಕಟ್ಟದೇ ₹23 ಕೋಟಿ ಗುಳುಂ? ಕೊಳಚೆ ನಿರ್ಮೂಲನಾ ಮಂಡಳಿಯ 8 ಕಡೆ ಲೋಕಾಯುಕ್ತ ದಾಳಿ

Date:

600 ಮನೆಗಳ ನಿರ್ಮಾಣಕ್ಕಾಗಿ ಬಿಡುಗಡೆಯಾಗಿದ್ದ ₹33 ಕೋಟಿ ಅನುದಾನದಲ್ಲಿ ₹23 ಕೋಟಿ ರೂಪಾಯಿ ದುರ್ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಭರ್ಜರಿ ದಾಳಿ ನಡೆಸಿದರು.

- Advertisement -

ದೂರು ಆಧರಿಸಿ ಬೆಳಗಾವಿ ಲೋಕಾಯುಕ್ತ ಎಸ್ಪಿ ಪ್ರಶನ್ ದೇಸಾಯಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಬೆಂಗಳೂರು ನಗರ, ಧಾರವಾಡ, ರಾಮದುರ್ಗ, ವಿಜಯಪುರ ಹಾಗೂ ಹುಬ್ಬಳ್ಳಿ ಸೇರಿದಂತೆ ವಿವಿಧ ಕಡೆಗಳಲ್ಲಿ ಏಕಕಾಲದಲ್ಲಿ ಪರಿಶೀಲನೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮನೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸದೇ ಕೋಟ್ಯಂತರ ರೂಪಾಯಿ ಅನುದಾನ ದುರ್ಬಳಕೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ದಾಳಿ ವೇಳೆ ಕೋಟ್ಯಂತರ ಮೌಲ್ಯದ ಬಿಲ್‌ಗಳು, ಕಡತಗಳು ಹಾಗೂ ಮಹತ್ವದ ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಳಚೆ ನಿರ್ಮೂಲನಾ ಅಭಿವೃದ್ಧಿ ಇಲಾಖೆಯ ನಿವೃತ್ತ ಎಇಇ ಶಂಭುಲಿಂಗಪ್ಪ, ಎಕ್ಸಿಕ್ಯೂಟಿವ್ ಇಂಜಿನಿಯರ್ ಲಮಾಣಿ, NTCC ಮ್ಯಾನೇಜ‌ರ್ ಎನ್‌. ಪ್ರಸಾದ್ ಹಾಗೂ ವಿಜಯಪುರ ಮೂಲದ ಗುತ್ತಿಗೆದಾರ ಗಿರಮಲಪ್ಪ ಜೋಗೂರ ವಿರುದ್ಧ ಪ್ರಕರಣ ದಾಖಲಾಗಿದೆ.

ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಆಳವಾದ ಪರಿಶೀಲನೆ ಮುಂದುವರಿಸಿದ್ದು, ಪ್ರಕರಣದಲ್ಲಿ ಇನ್ನಷ್ಟು ಅಧಿಕಾರಿಗಳು ಮತ್ತು ಗುತ್ತಿಗೆದಾರರ ಹೆಸರುಗಳು ಹೊರಬರುವ ಸಾಧ್ಯತೆ ಇದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...

ಬೆಳಗಾವಿ | ಹೆರಾಯಿನ್ ಮಾರಾಟ ಆರೋಪ: ಓರ್ವನ ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ...

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ...