ಬೆಳಗಾವಿ | ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 23,159 ಮತದಾರರ ಹೆಸರು ಪಟ್ಟಿಯಿಂದ ಹೊರಕ್ಕೆ

Date:

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸೋಮವಾರ ಸಂಜೆ ಮುಕ್ತಾಯಗೊಂಡಿದ್ದು, ಬೆಳಗಾವಿ ಜಿಲ್ಲೆಯ 18-ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 23,159 ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿದಿವೆ ಎಂದು ತಹಶೀಲ್ದಾ‌ರ್ ಪ್ರಕಾಶ ಗಾಯಕವಾಡ ತಿಳಿಸಿದ್ದಾರೆ.

- Advertisement -

ವಿಶೇಷ ಪರಿಷ್ಕರಣೆಗೂ ಮೊದಲು ಕ್ಷೇತ್ರದಲ್ಲಿ 2,11,483 ಮತದಾರರಿದ್ದರು. ಕ್ಷೇತ್ರದ 251 ಬೂತ್‌ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಿದ್ದರು. ಈ ಪೈಕಿ 1,88,324 ಮತದಾರರು ಮಾತ್ರ ಭರ್ತಿ ಮಾಡಿದ ಫಾರ್ಮ್‌ಗಳನ್ನು ಮರಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮರಳಿಸಿದ ಫಾರ್ಮ್‌ಗಳ ಡಿಜಿಟಲೀಕರಣದ ವೇಳೆ 6,518 ಮತದಾರರು ಮೃತಪಟ್ಟಿರುವುದು, 1,503 ಮತದಾರರು ಪತ್ತೆಯಾಗದಿರುವುದು, 13,008 ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿರುವುದು ಹಾಗೂ 2,967 ಮತದಾರರ ಹೆಸರುಗಳು ಡಬಲ್ ಎಂಟ್ರಿಯಾಗಿದ್ದಾರೆ.

ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸೋಮವಾರ ಸಂಜೆ ಮುಕ್ತಾಯವಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗದ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 23,159 ಮತದಾರರ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೆ ಎಂದು ತಹಶೀಲ್ದಾ‌ರ್ ಪ್ರಕಾಶ ಗಾಯಕವಾಡ ಹೇಳಿದರು.

ವಿಶೇಷ ಸಮಗ್ರ ಪರಿಷ್ಕರಣೆಗೂ ಮೊದಲು ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 2,11,483 ಮತದಾರರು ಪಟ್ಟಿಯಲ್ಲಿದ್ದರು. 251 ಬೂತ್‌ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಎನ್ಯುಮರೇಷನ್ ಫಾರ್ಮ್ ಅನ್ನು ವಿತರಿಸಿದ್ದರು. ಭರ್ತಿ ಮಾಡಿದ ಎನ್ಯುಮರೇಷನ್ ಫಾರ್ಮ್‌ಗಳನ್ನು ಒಟ್ಟು 1,88,324 ಮತದಾರರು ಮಾತ್ರ ಮರಳಿಸಿದ್ದಾರೆ. ಉಳಿದ 23,159 ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೆ ಎಂದು ತಿಳಿಸಿದರು.

ಭರ್ತಿ ಮಾಡಿ ಮರಳಿಸಿದ್ದ ಎನ್ಯುಮರೇಷನ್ ಫಾರ್ಮ್‌ಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಒಟ್ಟು 6518 ಮತದಾರರು ಮೃತರಾಗಿರುವುದಾಗಿ ತಿಳಿದು ಬಂದಿದೆ. 1,503 ಮತದಾರರ ಪತ್ತೆಯಾಗಿಲ್ಲ. ಒಟ್ಟು 13,008 ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ. 2967 ಮತದಾರರು ಡಬಲ್ ಎಂಟ್ರಿಯಾಗಿದ್ದಾರೆ ಎಂದು ತಿಳಿಸಿದರು.

ಆ. 24 ರಂದು 18-ರಾಮದುರ್ಗ ವಿಧಾನಸಭಾ ಕ್ಷೇತ್ರದ ಕರುಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಈ ಮತದಾರರ ಪಟ್ಟಿಗೆ ಆಕ್ಷೇಪಣೆ, ತಿದ್ದುಪಡಿ ಮತ್ತು ವರ್ಗಾವಣೆಗೆ ಅರ್ಜಿ ಸಲ್ಲಿಸುವವರು ಸಲ್ಲಿಸಬಹುದು. ಹೊಸದಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಕೂಡಾ 24 ರಿಂದ ಆರಂಭವಾಗಲಿದೆ. ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಬಿಎಲ್‌ಓಗಳನ್ನು ಸಂಪರ್ಕಿಸಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬಹುದು. ಅಂತಿಮ ಮತದಾರರ ಪಟ್ಟಿಯನ್ನು ಅ. 27ರಂದು ಪ್ರಕಟಿಸಲಾಗುವುದು ಎಂದು ತಹಶೀಲ್ದಾ‌ರ್ ತಿಳಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...

ಬೆಳಗಾವಿ | ಹೆರಾಯಿನ್ ಮಾರಾಟ ಆರೋಪ: ಓರ್ವನ ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ...

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ...