ಬಸ್ ಪಾಟಾ ಕಟ್ ಆಗಿದ್ದರಿಂದ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಜಮೀನಿಗೆ ಬಸ್ ನುಗ್ಗಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕನಿಂದ ಸಾವಳಗಿ ತೆರಳುವ ಮಾರ್ಗದಲ್ಲಿ ಚಲಿಸುತ್ತಿದ್ದ ಬಸ್ ಪಾಟಾ ಏಕಾಏಕಿ ಕಟ್ ಆಗಿ ನಿಯಂತ್ರಣ ಕಳೆದುಕೊಂಡು ಬಸ್ ಜಮೀನಿಗೆ ನುಗ್ಗಿದ್ದರಿಂದ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಬಸ್ ನಲ್ಲಿದ್ದ ಪ್ರಯಾನಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್ ನಲ್ಲಿ 60 ಪ್ರಯಾಣಿಕರು ಇದ್ದರೆಂದು ತಿಳಿದು ಬಂದಿದೆ