ಸರ್ಕಾರಿ ಶಾಲೆಗಳ ಮೂಲಸೌಕರ್ಯ ಬಲಪಡಿಸುವ ನಿಟ್ಟಿನಲ್ಲಿ ಬೆಳಗಾವಿ ನಗರದ ಕರ್ನಾಟಕ ಪಬ್ಲಿಕ್ ಶಾಲೆಯ ಸಮಗ್ರ ಅಭಿವೃದ್ಧಿಗೆ ₹8.04 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಆಸೀಫ್ (ರಾಜು) ಸೇರ್ ಹೇಳಿದರು.
ಕಾಕತಿವೇಸ್‌ನ ಸರ್ದಾರ್ ಪ್ರೌಢಶಾಲೆಯ ಸಭಾಭವನದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ 2025-26ನೇ ಸಾಲಿನ ಯೋಜನೆಯಡಿ ₹5 ಕೋಟಿ ವೆಚ್ಚದಲ್ಲಿ ನೂತನ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ₹3.04 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಸ್ಮಾರ್ಟ್ ಸಿಟಿ ಸೌಲಭ್ಯ, ರೋಬೋಟಿಕ್ಸ್ ಹಾಗೂ ಲ್ಯಾಂಗ್‌ಜ್ ಲ್ಯಾಬ್‌ಗಳು ಮತ್ತು ವರ್ಚುವಲ್ ಲ್ಯಾಬ್‌ಗಳ ಉದ್ಘಾಟನೆ ನೆರವೇರಿಸಲಾಯಿತು.
ತಂತ್ರಜ್ಞಾನ, ಕೌಶಲ ಮತ್ತು ಗುಣಮಟ್ಟದ ಶಿಕ್ಷಣವನ್ನು ಒಂದೇ ಸೂರಿನಡಿ ಒದಗಿಸುವ ಮೂಲಕ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಮಾದರಿ ಶಿಕ್ಷಣ ಸಂಸ್ಥೆಯಾಗಿ ರೂಪಿಸುವುದು ಯೋಜನೆಯ ಉದ್ದೇಶವಾಗಿದೆ. ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನ, ವಿಜ್ಞಾನ ಹಾಗೂ ಕೌಶಲಾಧಾರಿತ ಶಿಕ್ಷಣ ಪಡೆಯಲು ಈ ಸೌಲಭ್ಯಗಳು ಕಾರಿಯಾಗಲಿವೆ ಎಂದು ಅವರು ಹೇಳಿದರು.



