ಬೆಳಗಾವಿ | ಮಹಿಳಾ ಅಧಿಕಾರಿ ಮನೆಯ ಬಲ್ಬ್ ಹೋಲ್ಡರ್‌ಗಳಲ್ಲಿ 8 ರಹಸ್ಯ ಕ್ಯಾಮರಾ: ಸರ್ಕಾರಿ ಅಧಿಕಾರಿ ಬಂಧನ

Date:

ಮಹಿಳಾ ಅಧಿಕಾರಿಯ ಮನೆಯಲ್ಲಿ ಬಲ್ಬ್ ಹೋಲ್ಡರ್‌ಗಳಲ್ಲಿ ಹಿಡನ್ (ರಹಸ್ಯ) ಕ್ಯಾಮರಾ ಅಳವಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಅಧಿಕಾರಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ ವಿನೋದ್ ಟಿ ಎಂಬ ಸರ್ಕಾರಿ ಅಧಿಕಾರಿಯನ್ನು ಬಂಧಿಸಲಾಗಿದೆ.

- Advertisement -

ವೃತ್ತಿ ವೈಷಮ್ಯದ ಹಿನ್ನೆಲೆಯಲ್ಲಿ ಮಹಿಳಾ ಅಧಿಕಾರಿಯ ತೇಜೋವಧೆ ಮಾಡುವ ಉದ್ದೇಶದಿಂದ ಈ ಸಂಚು ರೂಪಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳಾ ಅಧಿಕಾರಿಯ ವರ್ಗಾವಣೆಗೆ ಕಾರಣರಾದ ಹಿನ್ನೆಲೆಯಲ್ಲಿ ಸೇಡು ತೀರಿಸಿಕೊಳ್ಳಲು ಆರೋಪಿಯು ಅಡ್ಡಮಾರ್ಗ ಹಿಡಿದಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಹಿಳಾ ಅಧಿಕಾರಿಯ ಖಾಸಗಿ ದೃಶ್ಯಗಳನ್ನು ಸಂಗ್ರಹಿಸುವ ಉದ್ದೇಶದಿಂದ ಮನೆಯ ಬಲ್ಬ್ ಹೋಲ್ಡರ್‌ಗಳಲ್ಲಿ ಒಟ್ಟು ಎಂಟು ಹಿಡನ್ ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ಈ ದೃಶ್ಯಗಳನ್ನು ಬಳಸಿಕೊಂಡು ನಕಲಿ ಪತ್ರಕರ್ತರ ಮೂಲಕ ಬ್ಲ್ಯಾಕ್‌ಮೇಲ್‌ ಮಾಡುವ ಯತ್ನ ನಡೆದಿದ್ದು, ಅದರಿಂದ ಬಂದ ಹಣವನ್ನು ಆರೋಪಿಗಳು ಹಂಚಿಕೊಳ್ಳುವ ಉದ್ದೇಶ ಹೊಂದಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಆರೋಪಿಯ ಮೊಬೈಲ್‌ ಫೋನ್‌ಗಳನ್ನು ವಶಕ್ಕೆ ಪಡೆದು ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮಹಿಳಾ ಅಧಿಕಾರಿಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮತ್ತೊಬ್ಬ ಅಧಿಕಾರಿಯನ್ನೂ ವಶಕ್ಕೆ ಪಡೆಯಲಾಗಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಮದುವೆ ಸಮಾರಂಭಕ್ಕೆ ಹೊರಟವರು ಮಸಣ ಸೇರಿದರು

ಬ್ಲ್ಯಾಕ್‌ಮೇಲ್ ಮೂಲಕ ಬಂದ ಹಣದಲ್ಲಿ ಮನೆ ಕಟ್ಟುವ ಯೋಜನೆಯೂ ಇದ್ದುದಾಗಿ ತನಿಖೆಯಲ್ಲಿ ಬಹಿರಂಗವಾಗಿದ್ದು, ಬಂಧಿತ ಆರೋಪಿ ವಿನೋದ್ ಟಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಸುದ್ದಿ ಓದಿದ್ದಿರಾ ? ಬ್ಯಾಟ್ ಬೀಸಿದ ‘ಫಿನಿಶರ್’ಗೆ ಕ್ಲೀನ್ ಬೌಲ್ಡ್ ಆದ ಸಂಸದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನ ಕೊಲೆ: ನಾಲ್ವರ ಬಂಧನ

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದ್ದು, ಹಳೆ ಹಣಕಾಸಿನ...

ಬೆಳಗಾವಿ | ಮತಕಳ್ಳತನ ಆರೋಪಕ್ಕೆ ಸಾಕ್ಷ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ: ಜಗದೀಶ್ ಶೆಟ್ಟರ್

ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು...

ವಿಟಿಯು ವಾರ್ಷಿಕ ಘಟಿಕೋತ್ಸವ: ಉತ್ತರ ಕನ್ನಡದ ಪ್ರತಿಭೆಗಳಿಗೆ ರಾಜ್ಯಮಟ್ಟದ ಗರಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ...

ಬೆಳಗಾವಿ | ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಸಮಾವೇಶ: ಪ್ರಮುಖ ನಿರ್ಣಯಗಳ ಅಂಗೀಕಾರ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...