ಬೆಳಗಾವಿ | ಚರಂಡಿ ನೀರು ಹರಿಸುವ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ

Date:

ಮನೆಯ ಹಿಂಭಾಗದ ಚರಂಡಿ ಮೂಲಕ ನೀರು ಹರಿಸುವ ವಿಚಾರವಾಗಿ ಉಂಟಾದ ಜಗಳ ವ್ಯಕ್ತಿಯೊಬ್ಬರ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ತೋಲಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

- Advertisement -

ಮೃತರನ್ನು ಅಮೀ‌ರ್ ಹುಸೇನ್‌ ಪಾಶ್ಚಾಪುರ (48) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಅಶೋಕ ರಾಮಾ ಉಗರಖೋಡ (28) ಎಂಬಾತನನ್ನು ನಂದಗಡ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕಳೆದ ಕೆಲವು ದಿನಗಳಿಂದ ಮನೆಯ ಹಿಂಭಾಗದ ಚರಂಡಿ ಮೂಲಕ ನೀರು ಹರಿಸುವ ವಿಚಾರವಾಗಿ ಇಬ್ಬರ ನಡುವೆ ಭಿನ್ನಾಭಿಪ್ರಾಯವಿತ್ತು. ಮಂಗಳವಾರ ಬೆಳಿಗ್ಗೆ ಇದೇ ವಿಷಯಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿ ಮಾರಾಮಾರಿಯಾಗಿ ಕೊಲೆಯಲ್ಲಿ ಅಂತ್ಯಗೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜಗಳದ ವೇಳೆ ಆರೋಪಿ ಅಶೋಕ, ಕೈಗೆ ಸಿಕ್ಕ ಪಿಕಾಸಿಯಿಂದ ಅಮೀ‌ರ್ ಹುಸೇನ್‌ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ಅಮೀ‌ರ್ ಹುಸೇನ್‌ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ನಂದಗಡ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ಈ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಘಟನೆಯ ನಿಖರ ಕಾರಣ ಹಾಗೂ ಇತರ ಆಯಾಮಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...