ಬೆಳಗಾವಿ | ಉತ್ತರ ಕರ್ನಾಟಕ ಅಭಿವೃದ್ಧಿಗೆ ಪ್ರತ್ಯೇಕ ರಾಜ್ಯವೇ ಪರಿಹಾರ: ಭೀಮಪ್ಪ ಗಡಾದ

Date:

ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಯಾಗಬೇಕಾದರೆ ಪ್ರತ್ಯೇಕ ರಾಜ್ಯ ರಚನೆಯಾಗಬೇಕು ಎಂದು ಮಾಹಿತಿ ಹಕ್ಕು ಹೋರಾಟಗಾರ ಹಾಗೂ ಉತ್ತರ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಭೀಮಪ್ಪ ಗಡಾದ ಎಂದು ಹೇಳಿದ್ದಾರೆ.

- Advertisement -

ಬೆಳಗಾವಿ ಜಿಲ್ಲೆಯ ಮೂಡಲಗಿ ಕೆಇಬಿ ಪ್ಲಾಟ್‌ನಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ನಡೆದ ಉತ್ತರ ಕರ್ನಾಟಕ ಹೋರಾಟ ಸಮಿತಿಯ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ವಿಚಾರದಲ್ಲಿ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಉತ್ತರ ಕರ್ನಾಟಕವನ್ನು ಪ್ರತಿನಿಧಿಸುವ ಶಾಸಕರು ಹಾಗೂ ಸಚಿವರು ಈ ಭಾಗದ ಅಭಿವೃದ್ಧಿಗೆ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರುತ್ತಿಲ್ಲ. ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕದ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದರು.

ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಅಭಿವೃದ್ಧಿಗೆ ಒತ್ತಾಯಿಸುವ ಉದ್ದೇಶದಿಂದ ಸರ್ಕಾರದ ಪೂರ್ವಾನುಮತಿ ಪಡೆದು ಆ.25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಮಿತಿಯ 500ಕ್ಕೂ ಹೆಚ್ಚು ಕಾರ್ಯಕರ್ತರು ಧರಣಿ ನಡೆಸಿದ್ದರು. ಆದರೆ, ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಲು ಅಥವಾ ಮನವಿ ಸ್ವೀಕರಿಸಲು ಒಬ್ಬ ಸಚಿವರೂ ಆಗಮಿಸದಿರುವುದು ವಿಷಾದಕರ ಸಂಗತಿ ಎಂದರು.

2019ರಲ್ಲಿ ಬೆಂಗಳೂರಿನಿಂದ ಉತ್ತರ ಕರ್ನಾಟಕದ ವಿವಿಧೆಡೆಗೆ ಒಂಬತ್ತು ಸರ್ಕಾರಿ ಕಚೇರಿಗಳನ್ನು ಸ್ಥಳಾಂತರಿಸುವ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದ್ದರೂ, ಇದುವರೆಗೆ ಅವುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಿಸಿಲ್ಲ. ಕೃಷ್ಣಾ ಭಾಗ್ಯ ಜಲ ನಿಗಮದ ಕಚೇರಿಯೂ ಆಲಮಟ್ಟಿಗೆ ಸ್ಥಳಾಂತರಗೊಂಡಿಲ್ಲ ಎಂದು ಅವರು ಟೀಕಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, 2028ರ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ಸಂಘಟನೆ ಬಲಪಡಿಸಿ ತಕ್ಕ ಉತ್ತರ ನೀಡಲಾಗುವುದು ಎಂದು ಭೀಮಪ್ಪ ಗಡಾದ ಹೇಳಿದರು.

ಉತ್ತರ ಕರ್ನಾಟಕ ಹೋರಾಟ ಸಮಿತಿ ಉಪಾಧ್ಯಕ್ಷ ಬಾಗಲಕೋಟದ ಎ.ಎ. ದಂಡಿಯಾ ಮಾತನಾಡಿ, ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂಬ ನಿರ್ಧಾರವನ್ನು 1996ರಲ್ಲೇ ಬಾಗಲಕೋಟೆಯಲ್ಲಿ ಕೈಗೊಳ್ಳಲಾಗಿತ್ತು. ಆಲಮಟ್ಟಿ ಆಣೆಕಟ್ಟು ಕಾಮಗಾರಿ ಇನ್ನೂ ಪೂರ್ಣಗೊಳ್ಳದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂದು ಆರೋಪಿಸಿದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್‌.ಎಸ್‌. ಪವಾಡಶೆಟ್ಟಿ, ನಾಗೇಶ ಗೊಲಶೆಟ್ಟಿ, ಪ್ರಕಾಶ ದೇಸಾಯಿ, ವಿಲಿನಕುಮಾರ ತಾರಿಹಾಳ, ಶ್ರೀಶೈಲ್ ಪಟಾರ್‌, ರಂಗನಾಥ ಸೇರಿದಂತೆ ವಿವಿಧ ಜಿಲ್ಲೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಹೊಂಡದಲ್ಲಿ ಮುಳುಗಿ ತಂದೆ, ಮಗ ಸಾವು

ಬಳ್ಳಾರಿ ನಗರದ ಕೋಟೆಯಲ್ಲಿರುವ ಹೊಂಡದಲ್ಲಿ ಮುಳುಗಿ ತಂದೆ ಮತ್ತು ಮಗ ಮಂಗಳವಾರ...

ಬೆಳಗಾವಿ | ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದ ಜಾತ್ರೆಯಲ್ಲಿ...

ಮೂರು ಮೈತೇಯಿ ಯುವಕರ ಹತ್ಯೆ ಖಂಡಿಸಿ ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ: ಐದು ಜಿಲ್ಲೆಗಳಲ್ಲಿ ಜನಜೀವನ ಸ್ತಬ್ಧ

ಕಾಂಗ್‌ಪೋಕ್ಪಿ ಜಿಲ್ಲೆಯ ಸುನುರೋಕ್ ಬೆಟ್ಟದ ಪ್ರದೇಶದಲ್ಲಿ ಅಕ್ಟೋಬರ್ 19 ರಂದು ಸೌದೆ...

SIR ವಿರುದ್ಧ ಜನತೆ| ಅ.23ರಂದು ಬೀದರ್‌ನಲ್ಲಿ ಪ್ರತಿಭಟನೆ, ತಿರಂಗಾ ಮೆರವಣಿಗೆ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ವಿರೋಧಿಸಿ, ಪ್ರಜಾಪ್ರಭುತ್ವದ ಮರುಸ್ಥಾಪನೆ...