ಬೆಳಗಾವಿ | ಹೊತ್ತಿ ಉರಿದ ಗೋವಿನಜೋಳ ತುಂಬಿದ್ದ ಲಾರಿ

Date:

ಏಕಾಏಕಿ ಹೊತ್ತಿದ ಬೆಂಕಿಯಿಂದಾಗಿ ಗೋವಿನಜೋಳ ತುಂಬಿದ್ದ ಲಾರಿ ಸುಟ್ಟು ಕರಕಲಾಗಿ ಅಪಾರ ಪ್ರಮಾಣದ ಗೋವಿನಜೋಳ ಹಾನಿಯಾಗಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಯರಡಾಲ ಕ್ರಾಸ್ ಬಳಿ ಶನಿವಾರ ನಡೆಯಿತು.

- Advertisement -

ಹುಬ್ಬಳ್ಳಿಯ ಶರೀಫ್ ಅಹ್ಮದ್ ಮುಲ್ಲಾ ಎಂಬವರಿಗೆ ಸೇರಿದ ಲಾರಿ ಇದಾಗಿದೆ. 620 ಚೀಲ ಗೋವಿನಜೋಳ ತುಂಬಿಕೊಂಡು ನರಗುಂದದಿಂದ ಬೆಳಗಾವಿ ಕಡೆ ಬರುತ್ತಿತ್ತು. ಬೈಲಹೊಂಗಲ ದಾಟಿ ಯರಡಾಲ ಕ್ರಾಸ್ ಹತ್ತಿರ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಲಾರಿಯಿಂದ ಜಿಗಿದು ಚಾಲಕ ಪಾರಾಗಿದ್ದಾನೆ. ಲಾರಿಯ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿದೆ ಎಂದು ತಿಳಿದು ಬಂದಿದೆ.

ಗೋವಿನಜೋಳ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಆದರೆ, ಅಷ್ಟರೊಳಗೆ ಬೆಂಕಿಯ ಪ್ರಖರತೆ ಹೆಚ್ಚಿದ್ದರಿಂದ ಲಾರಿ ಕರಕಲಾಗಿತ್ತು.

ರಸ್ತೆಯಲ್ಲೇ ಲಾರಿ ಹೊತ್ತಿ ಉರಿಯುತ್ತಿರುವುದು ಕಂಡು ಸ್ಥಳೀಯರು ಭೀತಿಗೊಂಡಿದ್ದರು. ಆದರೂ ತಮ್ಮ ಮೊಬೈಲ್‌ನಲ್ಲಿ ದೃಶ್ಯ ಸೆರೆ ಹಿಡಿಯುತ್ತಾ ನಿಂತಿದ್ದರು.

ಬೈಲಹೊಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬಸ್‌ಗೆ ಬೈಕ್ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ ಸೋಮವಾರ ರಾತ್ರಿ...

ಬೆಳಗಾವಿ | ಭೀಕರ ಅಗ್ನಿ ದುರಂತ:ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು,...

ಬೆಳಗಾವಿ | ಕಾಲುವೆಗೆ ನೀರು ಹರಿಸದ ಆಕ್ರೋಶ: ಟವ‌ರ್ ಏರಿ ರೈತನ ಪ್ರತಿಭಟನೆ

ಕಾಲುವೆಗೆ ನೀರು ಹರಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರೊಬ್ಬರು ಟವರ್ ಏರಿ ಪ್ರತಿಭಟನೆ...

ಬೆಳಗಾವಿ | ಕಾರಿಗೂ ಹೆಲ್ಮೆಟ್ ಕಡ್ಡಾಯವೇ? ಎ ಐ ಕ್ಯಾಮೆರಾ ಹೊಸ ನಿಯಮ

ಇಷ್ಟು ದಿನ ಬೈಕ್‌ ಸವಾರರಿಗೆ ಮಾತ್ರ ಹೆಲ್ಮೆಟ್ ಕಡ್ಡಾಯ ಎಂದುಕೊಂಡಿದ್ದವರಿಗೆ ಇದೀಗ...