ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

Date:

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದಲ್ಲಿ ನಡೆದಿದೆ.

- Advertisement -

ವಿದ್ಯಾಶ್ರೀ ಕಿಲ್ಲಾರಿ ಹಾಗೂ ಅವರ ಕುಟುಂಬದ ಸದಸ್ಯರ ಮೇಲೆ ಬೀರಪ್ಪ ರಾಮಪ್ಪ ಕಜ್ಜನ್ನವರ ದಾಳಿ ನಡೆಸಿದ್ದಾನೆ. ಆರೋಪಿಯು ಕಣ್ಣಿಗೆ ಖಾರದ ಪುಡಿ ಎರಚಿ, ಬಳಿಕ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿರುವುದಲ್ಲದೆ, ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಹತ್ತು ಜನರೊಂದಿಗೆ ಮನೆಗೆ ನುಗ್ಗಿದ ಆರೋಪಿಯು, ವಿದ್ಯಾಶ್ರೀಯ ತಂದೆ ಮಹಾದೇವ ಕಿಲ್ಲಾರಿ, ತಾಯಿ ಸೇರಿದಂತೆ ಕುಟುಂಬದ ಐದು ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ಕಳೆದ ಎರಡು ವರ್ಷಗಳಿಂದ ವಿದ್ಯಾಶ್ರೀಯನ್ನು ಮದುವೆಯಾಗುವಂತೆ ಒತ್ತಾಯ ಮಾಡುತ್ತಿದ್ದ ಬೀರಪ್ಪ, ಮಗಳನ್ನು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಗಾಯಾಳುಗಳನ್ನು ಚಿಕ್ಕೋಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಘಟನೆ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...