ಬೆಳಗಾವಿ : ನೀರಿನ ಟ್ಯಾಂಕಿಗೆ ವಿಷ ಬೆರಿಸಿದ ಘಟನೆ ಆರೋಪಿಗಳನ್ನು ಬಂಧಿಸಿ: ಶಾಸಕ ವಿಶ್ವಾಸ್ ವೈದ್ಯ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಘಟನೆಗೆ ಸಂಬಂಧಿಸಿ ಶಾಸಕ ವಿಶ್ವಾಸ್ ವೈದ್ಯ ಅವರು ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

- Advertisement -

ತಾಲೂಕಿನ ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ಜರುಗಿದ ತ್ರೈಮಾಸಿಕ ಜಿಲ್ಲಾ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಶಾಸಕರು ಮಾತನಾಡಿ, “ಸಾಮಾನ್ಯ ನಾಗರಿಕರ ಪ್ರಾಣಕ್ಕೆ ಸೊತ್ತಾಗುವಂತ ಈ ಕೃತ್ಯ ಸಹಿಸಲ್ಪಡದು. ತನಿಖೆ ಗಂಭೀರವಾಗಿ ಕೈಗೊಳ್ಳಿ, ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಿ,” ಎಂದು ಸವದತ್ತಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಧರ್ಮಾಕರ ಧರ್ಮಟ್ಟಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಭೆಯಲ್ಲಿ ಶಾಲೆಗಳ ಸ್ಥಿತಿಗತಿಗಳ ಕುರಿತಂತೆ ಚರ್ಚಿಸಿ, “ಅಹಿತಕರ ಘಟನೆಗಳೆನಗೆ ಅವಕಾಶ ನೀಡಬಾರದು. ಶಾಲೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇರಿಸಬೇಕು,” ಎಂದು ಬಿಇಒ ಮೋಹನ ದಂಡಿನ್ ಅವರಿಗೆ ಶಾಸಕರು ಸೂಚಿಸಿದರು.

ಯಕ್ಕೇರಿ–ಗೊರಬಾಳ ರಸ್ತೆಯಲ್ಲಿರುವ ಸರ್ಕಾರಿ ಶಾಲೆಗೆ ಕಲುಷಿತ ನೀರು ಸರಬರಾಜಾಗುತ್ತಿರುವ ಬಗ್ಗೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು. “ಮಕ್ಕಳ ಆರೋಗ್ಯಕ್ಕೆ ಅಪಾಯವಾಗದಂತೆ ಶುದ್ಧ ನೀರಿನ ಪೂರೈಕೆ ಖಚಿತಪಡಿಸಬೇಕು,” ಎಂದು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜೆಜೆಎಂ ಯೋಜನೆಯಡಿ ಇನ್ನೂ ಪೂರ್ಣವಾಗದ ಪಂಚಾಯಿತಿಗಳ ಪಟ್ಟಿ ನೀಡುವಂತೆ ಸೂಚಿಸಿದ ಶಾಸಕರು, “ಕಳೆದ ಬಾರಿ ನದಿ ನೀರಿನಲ್ಲಿ ತ್ಯಾಜ್ಯ ಸೇರ್ಪಡೆದ ಪರಿಣಾಮ ಸಾಂಕ್ರಾಮಿಕ ರೋಗಗಳ ಹರಡುವಿಕೆ ಕಂಡುಬಂದಿತ್ತು. ಈ ಬಾರಿ ನೀರಿನ ಪ್ರಮಾಣ ಹೆಚ್ಚಿದ್ದು, ಕ್ಲೋರಿನೇಶನ್ ಪ್ರಕ್ರಿಯೆ ಬಗ್ಗೆ ಹೆಚ್ಚಿನ ಎಚ್ಚರತೆ ವಹಿಸಬೇಕು,” ಎಂದು ಆರ್‌ಡಿಪಿಆರ್ ಎಇಇ ಬಸವರಾಜ ಅಯ್ಯನಗೌಡ ಅವರಿಗೆ ತಿಳಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...

ಬೆಳಗಾವಿ | ಹತ್ತರಗಿ ಟೋಲ್ ಬಳಿ ಹೆದ್ದಾರಿ ಬಂದ್ ತೆರವು: ವಾಹನ ಸಂಚಾರ ಪುನರಾರಂಭ

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಬಂದ್‌ ಆಗಿದ್ದ ಪುಣೆ-ಬೆಂಗಳೂರು ರಾಷ್ಟ್ರೀಯ...