ಬೆಳಗಾವಿ | ಸಾರ್ವಜನಿಕರಿಗೆ 4,500 ರೂ. ವಂಚನೆ ಆರೋಪ: ಸವಿಸ್ತಾರ ತನಿಖೆ, ಶಿವಾನಂದ ನೀಲಣ್ಣವರ ಬಂಧನ

Date:

ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಕಳೆದ ಒಂದು ತಿಂಗಳಿನಿಂದ ಗೌಪ್ಯವಾಗಿ ಮಾಹಿತಿ ಕಲೆಹಾಕಲಾಗುತ್ತಿತ್ತು. ಸಂಸ್ಥೆಯ ಹಣಕಾಸು ವ್ಯವಹಾರ, ಸಾರ್ವಜನಿಕರಿಂದ ಸಂಗ್ರಹಿಸಿದ ಠೇವಣಿ ಹಣವನ್ನು ಎಲ್ಲಿಗೆ ವರ್ಗಾವಣೆ ಮಾಡಲಾಗಿದೆ? ಯಾವ ರೀತಿಯಲ್ಲಿ ಬಳಸಲಾಗಿದೆ? ಎಂಬುದರ ಕುರಿತು ಅಧಿಕಾರಿಗಳು ಸವಿಸ್ತಾರ ತನಿಖೆ ನಡೆಸಿದ್ದಾರೆ.

- Advertisement -

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಶಿವಂ ಅಸೋಸಿಯೇಟ್ಸ್ ಸಂಸ್ಥೆ ಕಂಪೆನಿಯಾಗಿದ್ದು, ಇಂತಹ ಕಂಪನಿಗಳಲ್ಲಿ ಸಾರ್ವಜನಿಕರು ತಮ್ಮ ಹಣವನ್ನು ಠೇವಣಿ ಇಡಬಾರದು” ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಶಿವಂ ಅಸೋಸಿಯೇಟ್ಸ್‌ ಸಂಸ್ಥೆಯ ವಿರುದ್ಧ ಜಿಲ್ಲಾಡಳಿತ ಗಂಭೀರ ತನಿಖೆ ಕೈಗೊಂಡಿದ್ದು, ಠೇವಣಿದಾರರ ಹಿತಾಸಕ್ತಿ ಕಾಪಾಡಲು ಜಿಲ್ಲಾಡಳಿತ ಸಂಪೂರ್ಣ ಬದ್ಧವಾಗಿದೆ” ಎಂದು ಹೇಳಿದರು.

“ಸಾರ್ವಜನಿಕರಿಂದ ಅನಧಿಕೃತವಾಗಿ ಹಣ ಸಂಗ್ರಹಿಸುವ ಸಂಸ್ಥೆಗಳ ವಿರುದ್ಧ ಬಡ್ಸ್ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುತ್ತದೆ. ನಾಲ್ಕು ಪ್ರಮುಖ ಸ್ಥಳಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಹಣಕಾಸು ವ್ಯವಹಾರ, ಬ್ಯಾಂಕ್ ಖಾತೆಗಳ ವಿವರ, ಠೇವಣಿದಾರರ ಮಾಹಿತಿ ಸೇರಿದಂತೆ ಹಲವು ದಾಖಲೆಗಳನ್ನು ಪರಿಶೀಲಿಸಲಾಗಿದೆ. ಈ ವೇಳೆ ಸಂಸ್ಥೆಯ ಬಳಿ ಅಗತ್ಯ ಅನುಮತಿ ಪತ್ರ, ಲೈಸೆನ್ಸ್ ಹಾಗೂ ಆರ್‌ಬಿಐ ಮಾನ್ಯತೆ ಇಲ್ಲದಿರುವುದು ಬೆಳಕಿಗೆ ಬಂದಿದೆ” ಎಂದು ಹೇಳಿದರು.

ಬೆಳಗಾವಿ ಜಿಲ್ಲಾಧಿಕಾರಿ 1

“ಈ ಕುರಿತು ಬೆಳಗಾವಿ ಉಪವಿಭಾಗಾಧಿಕಾರಿಗಳು ಸಮಗ್ರ ತನಿಖಾ ವರದಿಯನ್ನು ಸಿದ್ಧಪಡಿಸಿದ್ದು, ವರದಿಯನ್ನು ಶುಕ್ರವಾರ ರಾತ್ರಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ತನಿಖೆಯಲ್ಲಿ ಹಣಕಾಸು ವರ್ಗಾವಣೆ, ಠೇವಣಿದಾರರ ಪಟ್ಟಿ, ಹೂಡಿಕೆ ದಾಖಲೆಗಳು ಸೇರಿದಂತೆ ಹಲವು ಅಕ್ರಮ ಅಂಶಗಳು ಪತ್ತೆಯಾಗಿವೆ” ಎಂದು ಹೇಳಿದರು.

“50 ಕೋಟಿ ರೂಪಾಯಿಗೂ ಅಧಿಕವಾಗಿ ವಂಚನೆ ನಡೆದಿದ್ದು, ಇದೊಂದು ಆಘಾತಕಾರಿ ಮತ್ತು ಗಂಭೀರ ಪ್ರಕರಣವಾಗಿದೆ” ಎಂದು ಹೇಳಿದರು.

ಪ್ರಕರಣದ ಹಿನ್ನೆಲೆ

ಬೆಳಗಾವಿಯಲ್ಲಿ ಮಾಜಿ ಸೈನಿಕರು ಹಾಗೂ ಸಾರ್ವಜನಿಕರ ಹಣ ದುರಪಯೋಗದ ಗಂಭೀರ ಆರೋಪ ಕೇಳಿಬಂದಿತ್ತು. ಬರೋಬ್ಬರಿ 45 ಸಾವಿರ ಜನ ಶಿವಂ ಅಸೋಸಿಯೇಟ್‌ನಲ್ಲಿ ₹4,500 ಕೋಟಿ ಹಣವನ್ನು ಹೂಡಿಕೆ ಮಾಡಿದ್ದರು ಎನ್ನಲಾಗಿದೆ. ಆದರೆ ವ್ಯವಹಾರ ನಡೆಸುತ್ತಿದ್ದ ಮಾಲೀಕ ಶಿವಾನಂದ್ ನೀಲಣ್ಣವರ್ ವಿರುದ್ಧ ₹4,500 ಕೋಟಿ ವಂಚನೆ ಆರೋಪದಡಿ ಎಫ್‌ಐಆರ್ ದಾಖಲಾಗಿತ್ತು. ಇದರ ಅನ್ವಯ ಆರೋಪಿ ಶಿವಾನಂದ್ ನೀಲಣ್ಣವರ್‌ನನ್ನು ಬಂಧಿಸಲಾಗಿದೆ.

ಇಲ್ಲಿ ಯಾವುದೇ ನಿಯಮಗಳು ಪಾಲನೆಯಾಗಿಲ್ಲ, ಬದಲಿಗೆ ಹೆಚ್ಚಿನ ಬಡ್ಡಿ ಕೊಡುವ ಬಗ್ಗೆ ಆಮಿಷವೊಡ್ಡಲಾಗಿತ್ತು ಎಂಬ ಆರೋಪಗಳಿವೆ. ಗುರುವಾರ ಮಧ್ಯಾಹ್ನದಿಂದ ಮನೆ, ಕಚೇರಿ, ಅಪಾರ್ಟ್‌ಮೆಂಟ್‌ ಸೇರಿ ಎಲ್ಲ ಕಡೆ ಶೋಧಕಾರ್ಯ ನಡೆಸಿದ ಅಧಿಕಾರಿಗಳು ಸದ್ಯ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿದ್ದರು. ನಂತರ ಶಿವಾನಂದ ನೀಲಣ್ಣವರ್ ವಿರುದ್ಧ ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹೆಚ್ಚಲಿರುವ ಧಗೆ: ಸಾರ್ವಜನಿಕರಿಗೆ ಜಿಲ್ಲಾಡಳಿತದ ಮುನ್ನೆಚ್ಚರಿಕೆ

ಜನರ ಹಣಕ್ಕೆ ತೊಂದರೆಯಾಗಬಾರದು ಎನ್ನುವ ಕಾರಣಕ್ಕೆ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ಕಾಯ್ದೆಯಡಿ ತನಿಖೆಗೆ ಡಿಸಿ ಮೊಹಮ್ಮದ್ ರೋಷನ್ ಆದೇಶ ಮಾಡಿದ್ದರು. ಇದರ ಬೆನ್ನಲ್ಲೇ ಶಿವಾನಂದಗೆ ಸೇರಿದ ಕಚೇರಿ, ಮನೆ, ಅಪಾರ್ಟ್‌ಮೆಂಟ್ ಮೇಲೆ ಗುರುವಾರ ಸಂಜೆ ನಾಲ್ಕು ಗಂಟೆಯ ವೇಳೆಗೆ ಎಸಿ ಶ್ರವಣ ಕುಮಾರ್, ಸಹಕಾರ ಇಲಾಖೆಯ ಅಧಿಕಾರಿಗಳು ಸ್ಥಳೀಯ ಪೊಲೀಸರ ಸಹಾಯ ಪಡೆದು ದಾಳಿ ಮಾಡಿದ್ದರು. ಈ ವೇಳೆಯಲ್ಲಿ ಕೆಲವು ದಾಖಲೆಗಳು ಪತ್ತೆಯಾಗಿವೆ.

ಶಿವಾನಂದ ನೀಲಣ್ಣವರ್ ಹೆಚ್ಚಿನ ಬಡ್ಡಿ ನೀಡುವುದಾಗಿ ಮಾಜಿ ಸೈನಿಕರು ಹಾಗೂ ಸಾರ್ವಜನಿಕರಿಂದ(40ರಿಂದ 45ಸಾವಿರ ಜನರಿಂದ) 4,500 ಕೋಟಿ ರೂಪಾಯಿ ಹಣ ಸಂಗ್ರಹಿಸಿದ್ದಾರೆ ಎನ್ನಲಾಗುತ್ತಿದೆ. ಹಣ ಸಂಗ್ರಹಣೆಗೆ ಯಾವುದೇ ಆರ್‌ಬಿಐ ಗೈಡ್‌ಲೈನ್ಸ್ ಪಾಲಿಸಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ನಗರ ಪೊಲೀಸ್ ಆಯುಕ್ತರು ಜಂಟಿಯಾಗಿ ದಾಳಿ ಮಾಡಿ ಪರಿಶೀಲನೆಗೆ ಸೂಚನೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...