ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಬೆಳಗಾವಿ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿದೆ.
ಸವದತ್ತಿ ತಾಲ್ಲೂಕಿನ ತಡಸಲೂರು ಗ್ರಾಮದ ಲಕ್ಷ್ಮಣ ಸಿಂಗಣ್ಣವರ ಶಿಕ್ಷೆಗೆ ಒಳಗಾದವ. 2023ರ ನವೆಂಬರ್ 30ರಂದು ಅಪ್ರಾಪ್ತಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದು ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ವಿಶೇಷ ಪೋಕ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು ಶಿಕ್ಷೆ ಪ್ರಕಟ ಮಾಡಿದ್ದಾರೆ. ಸಂತ್ರಸ್ತ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಕಾರದಿಂದ ₹4 ಲಕ್ಷ ಪರಿಹಾರ ನೀಡಲು ಆದೇಶಿಸಿದೆ.