ಬೆಳಗಾವಿ : ಬಾಲಕನಿಗೆ ಮದ್ಯ ಸೇವನೆ ಮಾಡಿಸಿದ ಅಮಾನವೀಯ ಕೃತ್ಯ ಬಾರ್ ಮಾಲಿಕರ ವಿರುದ್ಧ ಕ್ರಮ

Date:

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಬಾರ್ ಒಂದರಲ್ಲಿ ತಾತನೊಬ್ಬ ತನ್ನ ಅಪ್ರಾಪ್ತ ಮೊಮ್ಮಗನಿಗೆ ಮದ್ಯ ಸೇವನೆ ಮಾಡಿಸಿರುವ ಅಮಾನವೀಯ ಘಟನೆ ನಡೆದಿದೆ.

- Advertisement -

ತಾತ ತನ್ನ ಮೊಮ್ಮಗನೊಂದಿಗೆ ಬಾರ್‌ಗೆ ತೆರಳಿ, ತಾನು ಗ್ಲಾಸ್‌ನಲ್ಲಿ ಮದ್ಯ ಸೇವಿಸುತ್ತಿದ್ದ ವೇಳೆ ಪಕ್ಕದಲ್ಲೇ ಕುಳಿತಿದ್ದ ಮೊಮ್ಮಗನಿಗೂ ಮತ್ತೊಂದು ಗ್ಲಾಸ್‌ನಲ್ಲಿ ಮದ್ಯ ಹಾಕಿ ನೀಡಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ದೃಶ್ಯವನ್ನು ಗಮನಿಸಿದ ಸ್ಥಳೀಯರು ವಿರೋಧ ವ್ಯಕ್ತಪಡಿಸಿ ತಡೆಹಿಡಿಯಲು ಪ್ರಯತ್ನಿಸಿದರೂ, ತಾತ ಅವರ ಮಾತನ್ನು ಲೆಕ್ಕಿಸದೇ ಹೀನ ಕೃತ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಘಟನೆಗೆ ಸಂಬಂಧಿಸಿದ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಅಪ್ರಾಪ್ತ ಬಾಲಕನ ಭವಿಷ್ಯಕ್ಕೆ ಧಕ್ಕೆ ಉಂಟುಮಾಡುವ ಇಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅಬಕಾರಿ ಇಲಾಖೆ ಅಧಿಕಾರಿಯಾದ ಚಲವಾದಿ ಅವರು, “ಬಾರ್‌ಗಳಲ್ಲಿ ಮದ್ಯ ಸೇವನೆಗೆ ವಯಸ್ಸಿನ ಕಟ್ಟುನಿಟ್ಟಿನ ನಿಯಮಗಳಿವೆ. ರಾಯಬಾಗದಲ್ಲಿ ಅಪ್ರಾಪ್ತ ಬಾಲಕನೊಬ್ಬ ಕುಟುಂಬ ಸದಸ್ಯರೊಂದಿಗೆ ಮದ್ಯ ಸೇವಿಸಿರುವ ಪ್ರಕರಣ ನಮ್ಮ ಗಮನಕ್ಕೆ ಬಂದಿದೆ. ನಿಯಮ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಸಂಬಂಧಿತ ಬಾರ್ ಮಾಲಿಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು” ಎಂದು ತಿಳಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...