ಉಳುವವನೇ ಭೂಮಿ ಒಡೆಯ ಕಾಯ್ದೆ ಮೂಲಕ ಬಡವರಿಗೆ ಕೃಷಿಭೂಮಿ ದೊರೆಯುವಂತೆ ಮಾಡಿದ ಕ್ರಾಂತಿಕಾರಿ ನಾಯಕ ದೇವರಾಜ ಅರಸು ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕರೆ ನೀಡಿದರು.
ನಗರದಲ್ಲಿ ದೇವರಾಜ ಅರಸು ಜಯಂತಿ ಅಂಗವಾಗಿ ಗುರುವಾರ ನಡೆದ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭವಾದ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಕುಮಾರ ಗಂಧರ್ವ ರಂಗಮಂದಿರ ತಲುಪಿತು. ವಿವಿಧ ಜಾನಪದ ಕಲಾತಂಡಗಳ ಪ್ರದರ್ಶನ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಸವರಾಜ ಕುರಿಹುಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಉಪಸ್ಥಿತರಿದ್ದರು.



