ಬೆಳಗಾವಿ | ಅಲ್ಯೂಮಿನಿಯಂ ತಂತಿ ಕಳ್ಳರ ಬಂಧನ

Date:

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಘಟಗಿ ಬಸವೇಶ್ವರ ನಗರದಲ್ಲಿ ವಿದ್ಯುತ್ ಕಂಬಗಳಿಗೆ ಅಳವಡಿಸಿದ್ದ ಅಲ್ಯೂಮಿನಿಯಂ ತಂತಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕೋಡಿ ಪೊಲೀಸರು ಬಂಧಿಸಿ, ₹70 ಸಾವಿರ ಮೌಲ್ಯದ ಸುಮಾರು 200 ಕೆ.ಜಿ. ತಂತಿಯನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಕರೋಶಿ ಗ್ರಾಮದ ಮೊಹಮ್ಮದ್ ಅಜರ್ ಅಬ್ದುಲ್ ಸಮದ್‌ ಪಟೇಲ್ ಅವರು ನೀಡಿದ ದೂರಿನ ಮೇರೆಗೆ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಸ್ಟ್ 1ರ ಸಂಜೆ 6 ಗಂಟೆಯಿಂದ ಆಗಸ್ಟ್ 2ರ ಬೆಳಗ್ಗೆ 9 ಗಂಟೆಯ ನಡುವಿನ ಅವಧಿಯಲ್ಲಿ ಘಟಗಿ ಬಸವೇಶ್ವರ ನಗರದ ಹೊಸ ಪ್ಲಾಟ್‌ನ 8 ವಿದ್ಯುತ್ ಕಂಬಗಳಿಗೆ ಅಳವಡಿಸಿದ್ದ ಸುಮಾರು 200 ಕೆ.ಜಿ. ತೂಕದ ಅಲ್ಯೂಮಿನಿಯಂ ತಂತಿಯನ್ನು ಕತ್ತರಿಸಿ ಕಳ್ಳತನ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 276/2026ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್‌ ಅವರ ಸೂಚನೆಯಂತೆ ಪಿಎಸ್‌ಐ ಶಿವಕುಮಾರ ಬಿರಾದಾರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು.

ಹೆಚ್ಚುವರಿ ಎಸ್‌ಪಿ ಆರ್.ಬಿ. ಬಸ್ಸರಗಿ, ಚಿಕ್ಕೋಡಿ ಡಿಎಸ್‌ಪಿ ಗೋಪಾಲಕೃಷ್ಣ ಗೌಡರ ಹಾಗೂ ಸಿಪಿಐ ವಿಶ್ವನಾಥ ಚೌಗಲೆ ಅವರ ಮಾರ್ಗದರ್ಶನದಲ್ಲಿ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳುವಾಗಿದ್ದ ಅಲ್ಯೂಮಿನಿಯಂ ತಂತಿಯನ್ನು ವಶಪಡಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿ ಭಾಗವಹಿಸಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...

ಬೆಳಗಾವಿ | ಹೆರಾಯಿನ್ ಮಾರಾಟ ಆರೋಪ: ಓರ್ವನ ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ...

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ...