ಬೆಳಗಾವಿ | ಜಾತಿಮುಕ್ತ ಸಮಾಜ ನಿರ್ಮಾಣಕ್ಕೆ ಅಂಬೇಡ್ಕ-ಬಸವಣ್ಣರ ಚಿಂತನೆ ಅಗತ್ಯ: ಸತೀಶ ಜಾರಕಿಹೊಳಿ

Date:

ಜಾತಿ ಮುಕ್ತ ಭಾರತ ನಿರ್ಮಾಣವು ಪ್ರತಿಯೊಬ್ಬರ ಹೊಣೆಗಾರಿಕೆ. ಬಿ.ಆರ್. ಅಂಬೇಡ್ಕ‌ರ್ ಮತ್ತು ಬಸವಣ್ಣ ಅವರ ವಿಚಾರಧಾರೆಗಳು ಹಾಗೂ ನೈತಿಕ ಮೌಲ್ಯಗಳು ಪ್ರತಿ ಮನೆಗೂ ತಲುಪಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

- Advertisement -

ಬೆಳಗಾವಿ ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿ.ಎಸ್‌.ಜೀರಗೆ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ‘ವಿವೇಚನೆ, ವೈಚಾರಿಕತೆ ಮತ್ತು ಗಣರಾಜ್ಯ: ಬಿ.ಆರ್. ಅಂಬೇಡ್ಕ‌ರ್’ ವಿಷಯದ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ವಿಶ್ವವಿದ್ಯಾಲಯದ ಬಿ.ಆರ್. ಅಂಬೇಡ್ಕರ್ ಅಧ್ಯಯನ ಪೀಠ ಹಾಗೂ ಸಮಾಜಕಾರ್ಯ ವಿಭಾಗ, ಸಮಾಜಕಲ್ಯಾಣ ಇಲಾಖೆಯ ಬಿ.ಆ‌ರ್. ಅಂಬೇಡ್ಕರ್ ತರಬೇತಿ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

‘ಸಮಾಜದ ಒಳಿತಿಗಾಗಿ ಜೀವನ ಮುಡಿಪಾಗಿಟ್ಟು ತಾರತಮ್ಯ ನಿರ್ಮೂಲನೆಗೆ ಶ್ರಮಿಸಿದ ಮಹನೀಯರನ್ನು ಹೊಸ ಪೀಳಿಗೆಗೆ ಪರಿಚಯಿಸುವುದು ಇಂದಿನ ಅಗತ್ಯ. “ನಾವೆಲ್ಲರೂ ಒಂದೇ” ಎಂಬ ಸಂದೇಶವನ್ನು ಶಾಲಾ ಹಂತದಲ್ಲೇ ಮಕ್ಕಳ ಮನದಲ್ಲಿ ಬಿತ್ತಬೇಕು’ ಎಂದು ಸಲಹೆ ನೀಡಿದರು.

ಅಂಬೇಡ್ಕ‌ರ್ ಬಗ್ಗೆ ತಿಳಿದುಕೊಳ್ಳುವ ಕುತೂಹಲ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿದೆ. ಇಂತಹ ವೈಚಾರಿಕ ಕಾರ್ಯಕ್ರಮಗಳು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಪ್ರತಿವರ್ಷ ಜರುಗಬೇಕು’ ಎಂದರು.

ಚಿಂತಕ ರಾಜಪ್ಪ ದಳವಾಯಿ ಮಾತನಾಡಿ, ‘ವೈಚಾರಿಕ ತಳಹದಿಯಲ್ಲಿ ರೂಪುಗೊಂಡಿರುವ ನಮ್ಮ ಸಂವಿಧಾನವು ಸಾಮಾಜಿಕ ಪ್ರಜ್ಞೆಯ ಪ್ರತೀಕ. ನಾವು ಜಾತಿ ಚೌಕಟ್ಟು ಮೀರಿ ಬೆಳೆಯಬೇಕಿದೆ’ ಎಂದು ಅಭಿಪ್ರಾಯಪಟ್ಟರು.

ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಜೆ. ಸೋಮಶೇಖರ, ‘ಜ್ಞಾನಪೂರ್ಣ ಸಮಾಜ ನಿರ್ಮಾಣ ಇಂದಿನ ಅವಶ್ಯಕತೆ’ ಎಂದು ಹೇಳಿದರು.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಗಾಂಧಿನಗರದಲ್ಲಿ ಮಹಿಳೆ ಮೇಲೆ ಕ್ರೂರ ಹಲ್ಲೆ : ಮಾನವೀಯತೆಯೇ ತಲೆ ತಗ್ಗಿಸುವ ಘಟನೆ

ಶಾಸಕ ಆಸಿಫ್ ಸೇರ್, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ಸುನೀಲ ಹನುಮಣ್ಣವರ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕುಲಪತಿ ಪ್ರೊ. ಸಿ.ಎಂ. ತ್ಯಾಗರಾಜ ಸ್ವಾಗತಿಸಿದರು. ಕುಲಸಚಿವ ಸಂತೋಷ ಕಾಮಗೌಡ ವಂದಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...