ಬೆಳಗಾವಿ | ದಲಿತ ವಿದ್ಯಾರ್ಥಿ ಪರಿಷತ್ತಿಗೆ ಅಂಬೇಡ್ಕರ್ ಮಾರ್ಗವೇ ಅಂತಿಮ ಮಾರ್ಗ : ಶ್ರೀನಾಥ ಪೂಜಾರಿ

Date:

Advertisements

ಸುಮಾರು ಎರಡು ದಶಕಗಳಿಂದ ನಾಡಿನ ವಿದ್ಯಾರ್ಥಿ ಯುವಜನರ ಹಕ್ಕುಗಳ ರಕ್ಷಣೆ ಜೊತೆಗೆ ಶೈಕ್ಷಣಿಕ ಅಭಿವೃದ್ಧಿಗೆ ಹೋರಾಡುತ್ತಿರುವ ದಲಿತ ವಿದ್ಯಾರ್ಥಿ ಪರಿಷತ್ ಸಂಘಟನೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಾರ್ಗವೇ ಅಂತಿಮ ಮಾರ್ಗವಾಗಿದೆ ಎಂದು ಪರಿಷತ್ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಅವರು ಬೆಳಗಾವಿ ನಗರದಲ್ಲಿ ನಡೆದ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳ ಪ್ರಚಾರ ಮತ್ತು ಪ್ರಸಾರ ಮಾಡುವ ಜೊತೆಗೆ ಅವರು ತೋರಿದ ಮಾರ್ಗದಲ್ಲಿ ನಡೆದರೆ ಮಾತ್ರ ಶೋಷಿತ ಸಮುದಾಯದ ವಿಮೋಚನೆಯನ್ನು ಹೊಂದಬಹುದು. ಇಂದು ಶೋಷಿತ ಸಮುದಾಯದ ತಕ್ಕಮಟ್ಟಿಗೆ ಅಭಿವೃದ್ಧಿ ಕಾಣುತ್ತಿದೆ ಎಂದರೆ ಅದಕ್ಕೆ ನಮ್ಮ ಮೂಲ ಮಹಾಪುರುಷರಾದ ಬುದ್ಧ, ಬಸವ, ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ, ಶಾಹು ಮಹಾರಾಜ, ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಒಳಗೊಂಡ ಹೋರಾಡಿದ ಅನೇಕ ಸಮತಾವಾದಿ ಮಹಾಪುರುಷರ ತ್ಯಾಗ ಮತ್ತು ಬಲಿದಾನದ ಇದರ ಹಿಂದಿದೆ. ನಾವು ಇಂದು ಪಡೆಯುತ್ತಿರುವ ಶಿಕ್ಷಣ ನಮ್ಮ ಮಹಾಪುರುಷರ ಹೋರಾಟದ ಫಲವಾಗಿ ಕೊಡುಗೆಯಾಗಿ ಸಿಕ್ಕಿದ್ದು, ಈ ಕಾರಣಕ್ಕೆ ನಾವು ಇಂದು ಪಡೆಯುವ ಶಿಕ್ಷಣದಿಂದ ನಮ್ಮನ್ನು ಒಳಗೊಂಡ ಇಡೀ ಶೋಷಿತ ಸಮುದಾಯದ ಶೈಕ್ಷಣಿಕ ಅಭಿವೃದ್ಧಿಗಾಗಿ ಶ್ರಮಿಸಬೇಕಿದೆ ಹಾಗೂ ಹೋರಾಡಬೇಕಿದೆ ಎಂದು ಶ್ರೀನಾಥ ಪೂಜಾರಿ ಹೇಳಿದರು.

ಈ ವೇಳೆ ಬೆಳಗಾವಿ ಜಿಲ್ಲಾ ಸಂಚಾಲಕ ಆರ್ದಶ ಗಸ್ತಿ ಮಾತನಾಡುತ್ತ, ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾದ್ಯಂತ ಇವತ್ತು ಎಲ್ಲ ವರ್ಗದ ವಿದ್ಯಾರ್ಥಿ ಯುವಜನರ ಶೈಕ್ಷಣಿಕ ಹಕ್ಕುಗಳ ಕಾಪಾಡಲು ಮತ್ತು ಪಡೆಯಲು ಹೋರಾಡುತ್ತಿದೆ. ಇಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿ ಯುವಜನರ ನಾಯಕತ್ವ ಕಾಣಬಹುದು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿಯೂ ವಿದ್ಯಾರ್ಥಿ ಯುವಜನರ ಹಕ್ಕುಗಳಿಗಾಗಿ ಹೋರಾಡಬೇಕಿದೆ. ಈಗಾಗಲೇ ಅನೇಕ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಅನುಭವಿಸುತ್ತಿದ್ದಾರೆ, ಅವರಿಗೆ ಅವರ ಶೈಕ್ಷಣಿಕ ಹಕ್ಕುಗಳನ್ನು ದೊರಕಿಸಿಕೊಂಡಲು ಒಂದಾಗಿ ಹೋರಾಡೋಣ ಎಂದರು.

Advertisements

ಈ ಸಂದರ್ಭದಲ್ಲಿ ಸಭೆಯಲ್ಲಿ ನೂತನವಾಗಿ ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಜಿಲ್ಲಾ ಉಪಾಧ್ಯಕ್ಷರಾಗಿ ಸುದೀಪ್ ಐಹೊಳೆ, ಮಹಾಂತೇಶ್ ಸನದಿ, ಶಾಮ್ ಗಾಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ್ ಮಾಂಗ ಮತ್ತು ಅಥಣಿ ತಾಲ್ಲೂಕು ಅಧ್ಯಕ್ಷರಾಗಿ ಅಕ್ಷಯ್ ಮ್ಯಾಗೇರಿ, ಉಪಾಧ್ಯಕ್ಷರಾಗಿ ರಾಹುಲ್ ಕಾಂಬಳೆ, ಬೆಳಗಾವಿ ತಾಲ್ಲೂಕು ಅಧ್ಯಕ್ಷರಾಗಿ ಶಿವು ಕಾಂಬಳೆ, ಉಪಾಧ್ಯಕ್ಷರಾಗಿ ಅರುಣ್ ಹರಿಜನ, ಚಿಕ್ಕೊಡಿ ತಾಲ್ಲೂಕ ಅಧ್ಯಕ್ಷರಾಗಿ ಅಕ್ಷಯ್ ಕಾಂಬಳೆ, ಉಪಾಧ್ಯಕ್ಷರಾಗಿ ರಂಜಿತ್ ಕಾಂಬಳೆ, ಕಾಗವಾಡ ತಾಲ್ಲೂಕು ಅಧ್ಯಕ್ಷರಾಗಿ ವಿನೋದ್ ಕಾಂಬಳೆ, ಉಪಾಧ್ಯಕ್ಷರಾಗಿ ಪವನ ಬಡಿಗೇರ್, ಹುಕ್ಕೇರಿ ತಾಲ್ಲೂಕು ಅಧ್ಯಕ್ಷರಾಗಿ ಅಮಿತ ಪೂಜಾರಿ, ಉಪಾಧ್ಯಕ್ಷರಾಗಿ ತುಷಾರ ಪೂಜಾರಿ, ನಿಪ್ಪಾಣಿ ತಾಲ್ಲೂಕು ಅಧ್ಯಕ್ಷರಾಗಿ ರಾಹುಲ್ ಜೈಕರ್, ಉಪಾಧ್ಯಕ್ಷರಾಗಿ ಶಿವಮ್ ಕಾಂಬಳೆ, ರಾಯಬಾಗ ತಾಲ್ಲೂಕು ಅಧ್ಯಕ್ಷರಾಗಿ ಓಂಕಾರ್ ವಡೆಯರ, ಉಪಾಧ್ಯಕ್ಷರಾಗಿ ಪ್ರವೀಣ ಗೆಣ್ಣೆನವರ. ಮೂಡಲಗಿ ತಾಲ್ಲೂಕ ಅಧ್ಯಕ್ಷರಾಗಿ ಪರಶುರಾಮ್ ಭಜಂತ್ರಿ ಉಪಾಧ್ಯಕ್ಷರಾಗಿ ಲಖನ ಕಿಚಡಿ. ಬೈಲಹೊಂಗಲ ತಾಲ್ಲೂಕ ಅಧ್ಯಕ್ಷರಾಗಿ ಸುರೇಶ ಲೆಂಕನಟ್ಟಿ ಉಪಾಧ್ಯಕ್ಷರಾಗಿ ವಿಜಯ ಕೊಟ್ಟೆಗೇರ ಅವರನ್ನು ಆಯ್ಕೆ ಮಾಡಲಾಯಿತು. ಕೊನೆಯಲ್ಲಿ ಆಯ್ಕೆಗೊಂಡ ಎಲ್ಲ ನೂತನ ಪದಾಧಿಕಾರಿಗಳಿಗೆ ಸನ್ಮಾನಿಸಲಾಯಿತು.

ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X