ಬೆಳಗಾವಿ : ಅಂಗನವಾಡಿ ನೌಕರರ ಪ್ರತಿಭಟನೆ: ಗ್ರಾಚ್ಯುಟಿ ಬಾಕಿ ಬಿಡುಗಡೆಗೆ ಒತ್ತಾಯ

Date:

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಬೆಳಗಾವಿ ತಾಲೂಕಾ ಸಮಿತಿಯ ವತಿಯಿಂದ ಅಧ್ಯಕ್ಷೆ ಮಂದಾ ನೇವಗಿ ಅವರ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಯಿತು.

- Advertisement -

ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಸುಪ್ರೀಂ ಕೋರ್ಟ್ ತೀರ್ಪಿನನ್ವಯ ಗ್ರಾಚ್ಯುಟಿ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

2022ರ ಏಪ್ರಿಲ್ 25ರಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿ ಕೆಲಸಮಾಡುವ ಎಲ್ಲ ಕಾರ್ಯಕರ್ತರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಕಾಯಿದೆ 1972ರ ನಿಯಮಗಳು ಅನ್ವಯವಾಗುತ್ತವೆ ಎಂದು ಸ್ಪಷ್ಟಪಡಿಸಲಾಗಿದೆ. ಈ ತೀರ್ಪಿನ ಜಾರಿಗಾಗಿ 2023ರ ಜನವರಿಯಲ್ಲಿ ನಡೆದ ಸುದೀರ್ಘ ಚಳುವಳಿಯ ಬಳಿಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 2023ರ ಏಪ್ರಿಲ್‌ನಿಂದ ಗ್ರಾಚ್ಯುಟಿ ನೀಡುವ ಆದೇಶ ಹೊರಡಿಸಿತು

ಆದರೆ, 2011ರಿಂದ 2023ರ ಮಾರ್ಚ್ ತನಕ ನಿವೃತ್ತರಾದ 10,311 ಕಾರ್ಯಕರ್ತೆಯರು ಮತ್ತು 11,980 ಸಹಾಯಕಿಯರಿಗೆ ಈ ಪ್ರಯೋಜನ ಇನ್ನೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ಸಂಘವು ನಿರಂತರವಾಗಿ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದು, ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಸುಮಾರು ₹183 ಕೋಟಿ ಅನುದಾನ ಬಿಡುಗಡೆಗೆ ಪ್ರಸ್ತಾವನೆ ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ.

ಆದರೂ ಹಣಕಾಸು ಇಲಾಖೆ ಈ ಅನುದಾನವನ್ನು ಬಿಡುಗಡೆ ಮಾಡದೇ ವಿಳಂಬ ಮಾಡುತ್ತಿರುವುದರಿಂದ, ಪ್ರತಿಭಟನಾಕಾರರು ತಕ್ಷಣವೇ ಬಾಕಿ ಗ್ರಾಚ್ಯುಟಿ ಬಿಡುಗಡೆ ಮಾಡಿ ನಿವೃತ್ತ ನೌಕರರ ಹಕ್ಕನ್ನು ಗೌರವಿಸಬೇಕು ಎಂದು ಸರ್ಕಾರಕ್ಕೆ ತೀವ್ರವಾಗಿ ಒತ್ತಾಯಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...