ಶಿವಂ ಪ್ರಕರಣದ ಬಳಿಕ ಮತ್ತೊಂದು ಶಾಕ್: ಬೆಳಗಾವಿಯಲ್ಲಿ ಹೂಡಿಕೆ ಜಾಲ ಬಯಲು

Date:

ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಶಿವಂ ಅಸೋಸಿಯೇಟ್ಸ್ ಹೂಡಿಕೆ ಪ್ರಕರಣದ ಬೆನ್ನಲ್ಲೇ ಬೆಳಗಾವಿ ನಗರದಲ್ಲಿ ಮತ್ತೊಂದು ಬೃಹತ್ ಹೂಡಿಕೆ ಜಾಲ ಬೆಳಕಿಗೆ ಬಂದಿದೆ. ಸಾರ್ವಜನಿಕರಿಗೆ ಪ್ರತಿ ತಿಂಗಳು ಶೇಕಡಾ 5ರಷ್ಟು ಬಡ್ಡಿ ನೀಡುವ ಭರವಸೆ ನೀಡಿ ಕೋಟ್ಯಂತರ ರೂಪಾಯಿ ಠೇವಣಿಗಳನ್ನು ಸಂಗ್ರಹಿಸಿರುವ ಆರೋಪದಡಿ ಆದಿತ್ಯರಾಜ್ಯ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಇದೀಗ ತನಿಖೆಯ ಕೇಂದ್ರಬಿಂದುವಾಗಿದೆ.

- Advertisement -

ಭಾಗ್ಯನಗರದ 5ನೇ ಕ್ರಾಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಸ್ಥೆಯ ಕಚೇರಿಯ ಮೇಲೆ ಸಹಕಾರ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ. ನಿಖರ ಮಾಹಿತಿಯ ಆಧಾರದ ಮೇಲೆ ನಡೆದ ಕಾರ್ಯಾಚರಣೆಯಲ್ಲಿ ಹಲವು ದಾಖಲೆಗಳು ಹಾಗೂ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲನೆಗೆ ಒಳಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಸಂಸ್ಥೆಯು ಸಾಮಾಜಿಕ ಜಾಲತಾಣಗಳು ಹಾಗೂ ಆನ್‌ಲೈನ್ ವೇದಿಕೆಗಳ ಮೂಲಕ ಸಾರ್ವಜನಿಕರನ್ನು ಸೆಳೆಯುತ್ತಿದ್ದು, ಕಡಿಮೆ ಅವಧಿಯಲ್ಲಿ ಅಧಿಕ ಲಾಭ ದೊರೆಯುತ್ತದೆ ಎಂಬ ಆಮಿಷ ಒಡ್ಡಿ ಹಣ ಸಂಗ್ರಹಿಸಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮಹಾರಾಷ್ಟ್ರ ಮೂಲದ ವ್ಯಕ್ತಿಯೊಬ್ಬರ ಒಡೆತನದಲ್ಲಿರುವ ಈ ಸಂಸ್ಥೆ ಅನೇಕ ಜನರಿಂದ ಹಣ ಸಂಗ್ರಹಿಸಿದೆ ಎನ್ನಲಾಗಿದೆ.

ಪ್ರತಿ ತಿಂಗಳು 5 ಪ್ರತಿಶತ ಬಡ್ಡಿ ನೀಡುವ ಯೋಜನೆ ಸಾಮಾನ್ಯ ಬ್ಯಾಂಕ್‌ ಅಥವಾ ಮಾನ್ಯ ಹಣಕಾಸು ಸಂಸ್ಥೆಗಳಿಗಿಂತ ಬಹಳ ಹೆಚ್ಚಿನ ಲಾಭವನ್ನು ಸೂಚಿಸುತ್ತಿದ್ದು, ಇದೇ ಕಾರಣಕ್ಕೆ ಅನೇಕರು ತಮ್ಮ ಉಳಿತಾಯದ ಹಣವನ್ನು ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ. ಇದೀಗ ಹೂಡಿಕೆದಾರರು ತಮ್ಮ ಹಣದ ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಅಧಿಕಾರಿಗಳ ಪ್ರಕಾರ, ಸಂಸ್ಥೆಯು ಅಗತ್ಯ ನಿಯಂತ್ರಣ ಸಂಸ್ಥೆಗಳ ಅನುಮತಿ ಹಾಗೂ ಪರವಾನಗಿಗಳನ್ನು ಪಡೆದಿದೆಯೇ ಎಂಬ ವಿಚಾರವೂ ಪರಿಶೀಲನೆಯಲ್ಲಿದೆ. ಕಾನೂನುಬದ್ಧ ಮಾನ್ಯತೆ ಇಲ್ಲದೇ ಸಾರ್ವಜನಿಕರಿಂದ ಠೇವಣಿ ಸಂಗ್ರಹಿಸಿರುವ ಶಂಕೆ ವ್ಯಕ್ತವಾಗಿದ್ದು, ಸಂಸ್ಥೆಯ ಸಂಪೂರ್ಣ ಕಾರ್ಯವೈಖರಿಯನ್ನು ತನಿಖೆಗೆ ಒಳಪಡಿಸಲಾಗಿದೆ.

ಈ ನಡುವೆ ಸಂಸ್ಥೆಯ ವೆಬ್‌ಸೈಟ್‌ ಹಾಗೂ ಆನ್‌ಲೈನ್ ಹೂಡಿಕೆ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಡಿಜಿಟಲ್ ಮೂಲಕ ಹಣ ಸಂಗ್ರಹಿಸುವ ಪ್ರಕ್ರಿಯೆಗೂ ಬ್ರೇಕ್ ಹಾಕಲಾಗಿದೆ.

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಬಡ್ಡಿ ಹಾಗೂ ತ್ವರಿತ ಲಾಭದ ಭರವಸೆ ನೀಡುವ ಯೋಜನೆಗಳ ಬಗ್ಗೆ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗಿದೆ. ಯಾವುದೇ ಹೂಡಿಕೆ ಮಾಡುವ ಮುನ್ನ ಸಂಸ್ಥೆಯ ಕಾನೂನು ಮಾನ್ಯತೆ, ವಿಶ್ವಾಸಾರ್ಹತೆ ಹಾಗೂ ಹಣಕಾಸು ಹಿನ್ನೆಲೆಯನ್ನು ಪರಿಶೀಲಿಸುವುದು ಅಗತ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...