ಬೆಳಗಾವಿ | ಗೋಮಾಳ ಜಮೀನುಗಳ ರಕ್ಷಣೆಗೆ ತಹಸೀಲ್ದಾರರಿಗೆ ಮನವಿ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೋಮಾಳ/ಗಾಯರಾಗಣ ಜಮೀನುಗಳನ್ನು ದನ-ಕರುಗಳ ಮೇಯುವ ಉದ್ದೇಶಕ್ಕಾಗಿ ಮೀಸಲಿಟ್ಟಿದ್ದರೂ, ಇತ್ತೀಚಿನ ದಿನಗಳಲ್ಲಿ ಅವುಗಳನ್ನು ಇತರೆ ಉದ್ದೇಶಗಳಿಗೆ ಪರಿವರ್ತಿಸಲಾಗುತ್ತಿದೆ ಎಂದು ಆರೋಪಿಸಿ ಭಾರತೀಯ ಕಿಸಾನ್ ಸಂಘದ ರಾಮದುರ್ಗ ತಾಲೂಕು ಘಟಕ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

- Advertisement -

ಗೋಮಾಳ ಜಮೀನುಗಳನ್ನು ಗೋ ಸಂರಕ್ಷಣೆ, ಗೋಶಾಲೆ ಸ್ಥಾಪನೆ ಹಾಗೂ ಜಾನುವಾರುಗಳ ಮೇಯುವ ಕಾರ್ಯಗಳಿಗೆ ಮಾತ್ರ ಬಳಸಬೇಕು. ಯಾವುದೇ ಕಾರಣಕ್ಕೂ ಇವುಗಳನ್ನು ವಾಣಿಜ್ಯ ಅಥವಾ ಇತರೆ ಉದ್ದೇಶಗಳಿಗೆ ಪರಿವರ್ತಿಸಬಾರದು. ಒಂದು ವೇಳೆ ಈಗಾಗಲೇ ಪರಿವರ್ತನೆ ನಡೆದಿದ್ದರೆ, ಅಂತಹ ಜಮೀನುಗಳನ್ನು ವಾಪಸ್‌ ಪಡೆದು ಮೂಲ ಉದ್ದೇಶಕ್ಕೆ ಮೀಸಲಿಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಘ ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕೃಷಿಯಲ್ಲಿ ಗೋವಿನ ಪಾತ್ರ ಮಹತ್ವದ್ದಾಗಿದೆ. ಜಾನುವಾರುಗಳ ಸಂಖ್ಯೆ ಕುಸಿಯುತ್ತಿರುವ ಸಂದರ್ಭದಲ್ಲಿ ಗೋಮಾಳಗಳ ಸಂರಕ್ಷಣೆ ಅತ್ಯಾವಶ್ಯಕವಾಗಿದೆ. ರಾಸಾಯನಿಕ ಕೃಷಿಯಿಂದ ಉತ್ಪಾದನೆಯಾಗುವ ಆಹಾರ ಪದಾರ್ಥಗಳು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿವೆ. ಈ ಹಿನ್ನೆಲೆ ಪೂರ್ವಜರು ಉತ್ತಮ ಉದ್ದೇಶದಿಂದ ಉಳಿಸಿಕೊಂಡ ಗೋಮಾಳ ಜಮೀನುಗಳನ್ನು ಕಾಪಾಡುವುದು ಅಗತ್ಯ ಎಂದು ಸಂಘ ತಿಳಿಸಿದೆ.

1001406498

ಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆ, ಮುಂದಿನ ದಿನಗಳಲ್ಲಿ ಈ ಜಮೀನುಗಳಲ್ಲಿ ಮರ ನೆಡುವ ಕಾರ್ಯಕ್ರಮ ಕೈಗೊಳ್ಳುವುದಾಗಿ ಸಂಘ ತಿಳಿಸಿದೆ. ಸಾವಿರಾರು ಎಕರೆ ಗೋಮಾಳ ಜಮೀನುಗಳನ್ನು ಇತರೆ ಕಾರ್ಯಗಳಿಗೆ ಪರಿವರ್ತಿಸದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ದೇವರೆ ನನ್ನ ಅತ್ತೆ ಸಾಯಲಿ ದೇವಸ್ಥಾನ ಹುಂಡಿಯಲ್ಲಿ ವಿಚಿತ್ರ ಹರಕೆಯ ಚೀಟಿ

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಸುರೇಶ್ ನಂದೆಪ್ಪನವರ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಕೋಣನ್ನವರ, ತಾಲೂಕು ಕಾರ್ಯದರ್ಶಿ ಪವನ ಅಂಗಡಿ, ಎಸ್.ಎಸ್. ಹಿರೇಮಠ, ಶಿವನಗೌಡ ಕುಲಕರ್ಣಿ, ಮಹಿಳಾ ಪ್ರತಿನಿಧಿ ಸುಮಿತ್ರಾ ಹಣಮನೇರಿ, ಕಾಳಮ್ಮ ಬಡಿಗೇರ, ನಿಂಗಪ್ಪ ಗುದಗಿ, ಯಲ್ಲಪ್ಪ ಜಾಧವ, ಸಿದ್ದು ಹಂಪಿಹೊಳಿ, ಅಪ್ಪು ಪಾಟೀಲ, ತಿರಕಪ್ಪ ಬಾಡಗಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಬೆಳಗಾವಿ | ಕುರಿ ಕಳ್ಳತನ: ಮೂವರು ಬಂಧನ

ಬೆಳಗಾವಿ ನಗರದ ಭಾಗ್ಯನಗರದಲ್ಲಿ 10 ಕುರಿಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ತಿಲಕವಾಡಿ...

ಬೆಳಗಾವಿ | ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಹೊರವಲಯದಲ್ಲಿ ಶನಿವಾರ ರಾತ್ರಿ...