ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 17 ಅಂಗನವಾಡಿ ಕಾರ್ಯಕರ್ತೆ ಹಾಗೂ 42 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಜೂನ್ 16ರಂದು ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ನಿಗದಿತ ಅವಧಿಯ ನಂತರ ಸ್ವೀಕರವಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ), ಹುಕ್ಕೇರಿ ತಾಲೂಕು ಕಚೇರಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಅಂತಿಮ ದಿನಾಂಕದೊಳಗೆ ತಲುಪುವಂತೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ 08333-265099 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಿಡಿಪಿಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




