ದೇಶ ಸೇವೆಗಾಗಿ ತಮ್ಮ ಜೀವನವನ್ನೇ ಸಮರ್ಪಿಸಿದ ನಮ್ಮ ಮಾಜಿ ಸೈನಿಕರ ಕುಟುಂಬಗಳಿಗೆ ಅಗತ್ಯ ಸೌಲಭ್ಯಗಳು ತಲುಪಬೇಕು ಎಂಬ ಉದ್ದೇಶದಿಂದ ಚಿಕ್ಕೋಡಿಯಲ್ಲಿ CSD ಕ್ಯಾಂಟೀನ್ ಆರಂಭಿಸುವ ಕುರಿತು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಕೇಂದ್ರ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು
ಈ ಮನವಿಗೆ ಸಕಾರಾತ್ಮಕ ಸ್ಪಂದನೆ ದೊರೆತಿದ್ದು, ಚಿಕ್ಕೋಡಿಯಲ್ಲಿ ಮಾಜಿ ಸೈನಿಕರಿಗಾಗಿ (ESM URC) ಆರಂಭಿಸಲು ಅಗತ್ಯ ಮಾನದಂಡಗಳು ಪೂರ್ಣಗೊಂಡಿರುವುದಾಗಿ ತಿಳಿಸಲಾಗಿದೆ. ಜೊತೆಗೆ, ಕ್ಯಾಂಟೀನ್ ಆರಂಭ ಪ್ರಕ್ರಿಯೆಯನ್ನು ಶೀಘ್ರಗೊಳಿಸಲು ಸ್ಥಳೀಯ ಘಟಕಕ್ಕೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ.
ಚಿಕ್ಕೋಡಿ ಹಾಗೂ ಸುತ್ತಮುತ್ತಲಿನ ಭಾಗಗಳ ಸಾವಿರಾರು ಮಾಜಿ ಸೈನಿಕರು ಮತ್ತು ಅವರ ಕುಟುಂಬಗಳಿಗೆ ಇದರಿಂದ ಬಹಳ ಅನುಕೂಲವಾಗಲಿದೆ. ದೂರದ ಪ್ರದೇಶಗಳಿಗೆ ತೆರಳಿ ಸೌಲಭ್ಯ ಪಡೆಯಬೇಕಾದ ಅನಿವಾರ್ಯತೆ ಕಡಿಮೆಯಾಗಲಿದ್ದು, ಅಗತ್ಯ ವಸ್ತುಗಳು ಮತ್ತು ಸೇವೆಗಳು ಸ್ಥಳೀಯ ಮಟ್ಟದಲ್ಲೇ ದೊರೆಯಲಿವೆ.
ಈ ಮಹತ್ವದ ಬೇಡಿಕೆಗೆ ಸ್ಪಂದಿಸಿ ಕ್ರಮ ಕೈಗೊಂಡ ಕೇಂದ್ರ ಸರ್ಕಾರ ಹಾಗೂ ರಕ್ಷಣಾ ಸಚಿವರಿಗೆ ಹೃತ್ಪೂರ್ವಕ ಧನ್ಯವಾದಗಳು. ಮಾಜಿ ಸೈನಿಕರ ಕಲ್ಯಾಣಕ್ಕಾಗಿ ನನ್ನ ಪ್ರಯತ್ನಗಳು ಮುಂದುವರಿಯಲಿವೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ತಿಳಿಸಿದ್ದಾರೆ.



