ಬೆಳಗಾವಿ | ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಆಗ್ರಹ

Date:

ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಪರಿಹಾರ ಮೊತ್ತ ನೀಡಲು ಭಿಕ್ಷಾಟನೆ ಅಭಿಯಾನ ನಡೆಸುತ್ತಿದ್ದ ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ದುರುಳರು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ರೈತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಬೈಲಹೊಂಗಲ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಉಪ ವಿಭಾಗಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಬಾಗಲಕೋಟೆ ಜಿಲ್ಲೆಯ ಬಿಳಗಿಯಲ್ಲಿ ಭಿಕ್ಷಾಟನೆ ಅಭಿಯಾನಕ್ಕೆ ತೆರಳುತ್ತಿದ್ದ ವೇಳೆ, ಯಲ್ಲಪ್ಪ ಮೇಲೆ ಐವರು ಮುಸುಕುಧಾರಿಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದವರು ಮತ್ತು ಹಲ್ಲೆಗೆ ಕುಮ್ಮಕ್ಕು ನೀಡಿದವರನ್ನು ಬಂಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ರೈತ ಮುಖಂಡ ಶಿವನಶಿಂಗ ಮೋಖಾಶಿ, “ಯಲ್ಲಪ್ಪ ಅವರ ಮೇಲಿನ ಹಲ್ಲೆ ಖಂಡನೀಯ. ರೈತ ಹೋರಾಟಗಾರರಿಗೆ ರಕ್ಷಣೆ ನೀಡಬೇಕು. ಹಲ್ಲೆ ಮಾಡಿದವರನ್ನು ಬಂಧಿಸಬೇಕು” ಎಂದು ಆಗ್ರಹಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರತಿಭಟನೆಯಲ್ಲಿ ರೈತ ಮುಖಂಡ ದೇಮಪ್ಪ ಹುದಲಿ, ಬೀರಪ್ಪ ದೇಶನೂರ, ಅಶೋಕ ಕಳಸನ್ನವರ, ನಾಗೇಂದ್ರ ಚೌಗಲೆ, ಚಂದ್ರಪ್ಪ ಮೋಖಾಶಿ, ಸಿದ್ಧಪ್ಪ ಜಳಕದ, ಸೋಮಶೇಖರ ಕಲಘಟಗಿ, ಮಲ್ಲಿಕಾರ್ಜುನ ಜುಟ್ಟನ್ನವರ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ, ಬೀದರ್‌ನಲ್ಲಿ ನೆಲೆಸಿರುವ ಮರಾಠಿಗರಿಗಾಗಿ ₹2 ಕೋಟಿ ಬಿಡುಗಡೆ ಮಾಡಿದ ಮಹಾರಾಷ್ಟ್ರ ಸರ್ಕಾರ

ಕರ್ನಾಟಕದ ಗಡಿ ಜಿಲ್ಲೆಗಳಾದ ಬೀದರ್ ಮತ್ತು ಬೆಳಗಾವಿಯಲ್ಲಿ ಕೆಲವು ಸಾಂಸ್ಕೃತಿಕ ಚಟುವಟಿಕೆಗಳನ್ನು...

ಬೆಳಗಾವಿ | ನೀರಿನ ಸಮಸ್ಯೆ; ಕಟ್ಟಡ ನಿರ್ಮಾಣಕ್ಕೂ ತಟ್ಟಿದ ಬಿಸಿ

ಬೆಳಗಾವಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರಿನ ಕೊರತೆಯಿಂದಾಗಿ ನಿರ್ಮಾಣ ಕಾರ್ಯಗಳಿಗೆ...

ಬೆಳಗಾವಿ | ಮನರೇಗಾದಡಿ ಮಹಿಳೆಯರಿಗೆ ಉದ್ಯೋಗ ನೀಡುವಂತೆ ಗ್ರಾ.ಪಂಚಾಯಿಗೆ ಮುತ್ತಿಗೆ

ಬೆಳಗಾವಿ ತಾಲೂಕಿನ ಕಾಳೇನಟ್ಟಿ ಗ್ರಾಮದ ಮಹಿಳೆಯರಿಗೆ ಮನರೇಗಾದಡಿ ಉದ್ಯೋಗ ನೀಡುವಂತೆ ಆಗ್ರಹಿಸಿ...

ಬೆಳಗಾವಿ | ರಾಜ್ಯದಲ್ಲಿ 15ರಿಂದ 20ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇವೆ; ಸಚಿವ ಸತೀಶ ಜಾರಕಿಹೊಳಿ

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 15ರಿಂದ 20ಸ್ಥಾನ ಗೆಲ್ಲುವ ಗುರಿ...