ಬೆಳಗಾವಿ | ವಿವಾಹಿತೆ ಜೊತೆ ಯುವಕ ಪರಾರಿ ಯುವಕನ ಮನೆ ಮೇಲಿನ ದಾಳಿ: ಮೂವರು ಆರೋಪಿಗಳ ಬಂಧನ

Date:

ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ವಿವಾಹಿತೆ ಜತೆಗೆ ಯುವಕ ಪರಾರಿಯಾದ ಹಿನ್ನೆಲೆಯಲ್ಲಿ ಯುವಕನ ಮನೆ ಮೇಲೆ ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಮಾರಿಹಾಳ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

- Advertisement -

ಬಂಧಿತರನ್ನು ಜೈತುನಮಾಳ ಗ್ರಾಮದ ನಾಗರಾಜ ನಾಯಕ, ರವಿ ಬಿಜಗತ್ತಿ ಹಾಗೂ ಈಶ್ವರ ಮುಚ್ಚಂಡಿ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

ಭರಮ್ಯಾನಟ್ಟಿ ಗ್ರಾಮದ ಯುವಕ ಯಲ್ಲಪ್ಪ ನಾಯಕ ಹಾಗೂ ಜೈತುನಮಾಳ ಗ್ರಾಮದ ವಿವಾಹಿತೆ ನಾಗವ್ವ ನಾಯಕ ಭಾನುವಾರ ಪರಾರಿಯಾಗಿದ್ದರು. ಇದರಿಂದ ಆಕ್ರೋಶಗೊಂಡ ಮಹಿಳೆಯ ಸಂಬಂಧಿಕರು ಹಾಗೂ ಇತರರು ಯಲ್ಲಪ್ಪನ ಮನೆ ಮೇಲೆ ದಾಳಿ ನಡೆಸಿದ್ದರು.

ಈ ಸಂಬಂಧ ಯಲ್ಲಪ್ಪನ ತಂದೆ ಭೀಮಪ್ಪ ನಾಯಕ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನ ಪ್ರಕಾರ, ಭಾನುವಾರ ರಾತ್ರಿ ಸುಮಾರು 8 ಗಂಟೆಗೆ 50ಕ್ಕೂ ಹೆಚ್ಚು ಜನರು ಮನೆಗೆ ನುಗ್ಗಿ, ಪತ್ನಿ ದುರ್ಗವ್ವ ಅವರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದ್ದು, ಮನೆ ಹೆಂಚುಗಳು, ಟಿ.ವಿ., ಪೀಠೋಪಕರಣ ಸೇರಿದಂತೆ ಸುಮಾರು ₹3 ಲಕ್ಷ ಮೌಲ್ಯದ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿದ್ದಾರೆ.

ಅಲ್ಲದೆ ಜೀವ ಬೆದರಿಕೆಯನ್ನೂ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ತಲ್ವಾರ್, ಜಂಬೆ, ಕುಡಗೋಲು ಹಾಗೂ ಬಡಿಗೆಗಳೊಂದಿಗೆ ಬಂದಿದ್ದ ಆರೋಪಿಗಳ ದಾಳಿಯಿಂದ ಮನೆಯವರು ಹೊರಗೆ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಹಾಗೂ 25 ಕುರಿಗಳನ್ನು ಕಳವು ಮಾಡಲಾಗಿದೆ ಎಂದು ಯಲ್ಲಪ್ಪ ಕುಟುಂಬದವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯಂತೆ, ಯಲ್ಲಪ್ಪ ಮತ್ತು ನಾಗವ್ವ ಪರಸ್ಪರ ಸ್ನೇಹಿತರಾಗಿದ್ದು, ನಾಗವ್ವ ಕಳೆದ ವರ್ಷ ಬೇರೆಯವರೊಂದಿಗೆ ವಿವಾಹವಾಗಿದ್ದರು. ಪ್ರಕರಣದ ಕುರಿತು ಮಾರಿಹಾಳ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹2,700 ಬೆಲೆಯ ಕ್ಯಾನ್ಸರ್‌ ಔಷಧಿ ಮೇಲೆ ₹27,000 MRP: ಇದು ʼನರಮೇಧʼ ಎಂದ ಸುಪ್ರೀಂ ಕೋರ್ಟ್

ಕ್ಯಾನ್ಸರ್‌ ಔಷಧಿಗಳ ಬೆಲೆಯಲ್ಲಿ ಭಾರೀ ವ್ಯತ್ಯಾಸ ಕಂಡುಬರುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್‌...

​’ಕಂದಾ, ನೀನು ನ್ಯಾಯಾಲಯ ಕಂಡ ಅತಿ ಧೈರ್ಯಶಾಲಿ ಬಾಲಕಿ’: ಪೋಕ್ಸೊ ಸಂತ್ರಸ್ತೆಗೆ ನ್ಯಾಯಾಧೀಶರ ಭಾವುಕ ಪತ್ರ

ಅತ್ಯಾಚಾರದಂತಹ ಗಂಭೀರ ಪ್ರಕರಣಗಳಲ್ಲಿ ನ್ಯಾಯಾಲಯದ ತೀರ್ಪುಗಳು ಕೇವಲ ಶಿಕ್ಷೆ ಮತ್ತು ದಂಡಕ್ಕೆ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಕೋಡಿಹಳ್ಳಿ ಚಂದ್ರಶೇಖರ್ ಬಂಧನ ಖಂಡಿಸಿ ಮುಧೋಳದಲ್ಲಿ ರೈತರ ಪ್ರತಿಭಟನೆ

ಕಳಸಾ–ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ರೈತಪರ ಹೋರಾಟ ನಡೆಸಿದ್ದ ರಾಜ್ಯ ರೈತ...