ನನ್ನ ಕ್ಷೇತ್ರದಲ್ಲಿ ಸುಮಾರು 23 ಸಾವಿರ ಮತದಾರರು ಮತಪಟ್ಟಿಯಿಂದ ಡಿಲಿಟ್ ಆಗುವ ಆತಂಕ ಎದುರಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮ್ಯಾಪಿಂಗ್ ಹೆಸರಿನಲ್ಲಿ ಮದುವೆಯಾದ ಮಹಿಳೆಯರನ್ನು ‘ನಾಪತ್ತೆ’ ಎಂದು ತೋರಿಸಲಾಗುತ್ತಿದೆ. ಈ ಮೂಲಕ ಮತದಾರರನ್ನು ವ್ಯವಸ್ಥಿತವಾಗಿ ಪಟ್ಟಿಯಿಂದ ತೆಗೆದುಹಾಕುವ ಯತ್ನ ನಡೆಯುತ್ತಿದೆ,” ಎಂದು ಹೇಳಿದರು.
ನೇರವಾಗಿ ಚುನಾವಣೆಯಲ್ಲಿ ಎದುರಿಸಿ ಗೆಲ್ಲಲು ಸಾಧ್ಯವಾಗದೆ, ಇಂತಹ ಕುತಂತ್ರದ ಮಾರ್ಗವನ್ನು ಅನುಸರಿಸಲಾಗುತ್ತಿದೆ,” ಎಂದು ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮತದಾರರ ಪಟ್ಟಿಯ ತಿದ್ದುಪಡಿ ಪ್ರಕ್ರಿಯೆಯಲ್ಲಿ ಗಂಭೀರ ಅವ್ಯವಸ್ಥೆಗಳು ನಡೆಯುತ್ತಿದ್ದು, ಈ ಕುರಿತು ತಕ್ಷಣ ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.



