ಬೆಳಗಾವಿ | ಕಾಂಗ್ರೆಸ್‌ ಕಚೇರಿ ಮುತ್ತಿಗೆ ಯತ್ನ ವಿಫಲ: 100ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ವಶಕ್ಕೆ

Date:

ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಇಂದು ನಗರದಲ್ಲಿ ನಡೆದಿದೆ.

- Advertisement -

ರಾಹುಲ್ ಗಾಂಧಿ ಅವರು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಮಾನ ಹರಾಜು ಹಾಕಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್ ಪಕ್ಷ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು ಆರ್‌ಟಿಓ ಸರ್ಕಲ್ ಬಳಿ ಇರುವ ಜಿಲ್ಲಾ ಕಾಂಗ್ರೆಸ್‌ ಕಚೇರಿಯತ್ತ ಮೆರವಣಿಗೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿದರು. ಮುನ್ನೆಚ್ಚರಿಕಾ ಕ್ರಮವಾಗಿ ಸುಮಾರು 100ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು.

ಈ ವೇಳೆ ಬಿಜೆಪಿ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಈರಣ್ಣ ಅಂಗಡಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಪ್ರಧಾನ ಕಾರ್ಯದರ್ಶಿ ಆನಂದ ಅತ್ತುಗೋಳ, ಪ್ರಶಾಂತ್ ಅಮ್ಮಿನಭಾವಿ, ಪ್ರಮೋದ್ ನುಗ್ಗಾನಟ್ಟಿ, ಸದಾಶಿವ ಪಾಟೀಲ್‌, ಪ್ರಸಾದ್‌ ದೇವರಮನಿ, ಮಹಾಂತೇಶ ವಕ್ಕುಂದ, ಶಿಲ್ಪಾ ಕೆಕರೆ, ಶ್ವೇತಾ ಜಗದಾಳೆ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಶಾಲೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಘಟನೆಯ ಹಿನ್ನೆಲೆ ಆರ್‌ಟಿಓ ಸರ್ಕಲ್‌ ಸುತ್ತಮುತ್ತ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದ್ದು, ಪೊಲೀಸರು ಭದ್ರತೆಯನ್ನು ಕಟ್ಟು ನಿಟ್ಟಾಗಿ ಕಾಪಾಡಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...