ಬೆಳಗಾವಿ : ಚಿನ್ನಾಭರಣ ಮಾರಾಟ ಮಳಿಗೆಯಲ್ಲಿ ದರೋಡೆ ಯತ್ನ : ಇಬ್ಬರ ಬಂಧನ

Date:

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿನ್ನಾಭರಣ ಮಾರಾಟ ಮಳಿಗೆಯಲ್ಲಿ ಆಗಸ್ಟ್‌ 26ರಂದು ನಡೆದಿದ್ದ ದರೋಡೆ ಯತ್ನ ಪ್ರಕರಣದಲ್ಲಿ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.

- Advertisement -

ಬಂಧಿತರು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಇಚಲಕರಂಜಿಯ ವಿಜಯ ಜಾವೀರ ಹಾಗೂ ಸಾಂಗ್ಲಿ ಜಿಲ್ಲೆಯ ಜರಂಡಿಯ ಯಶವಂತ ಗುರವ. ಇವರಿಂದ ದರೋಡೆ ವೇಳೆ ಬಳಸಿದ ಎರಡು ಪಿಸ್ತೂಲ್, ಏಳು ಜೀವಂತ ಗುಂಡುಗಳು, ಕಾರು ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದರೋಡೆ ಯತ್ನದ ಸಂಪೂರ್ಣ ದೃಶ್ಯಾವಳಿ ಮಳಿಗೆಯಲ್ಲಿದ್ದ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದನ್ನೇ ಆಧಾರ ಮಾಡಿಕೊಂಡು ಪೊಲೀಸರು ತನಿಖೆ ಮುಂದುವರೆಸಿ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ ಎಂದು ಎಸ್‌ಪಿ ಡಾ. ಭೀಮಾಶಂಕರ ಗುಳೇದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಪ್ರಕರಣದಲ್ಲಿ ಇನ್ನೂ ಮೂವರು ಪರಾರಿಯಾಗಿದ್ದು, ಸಾಂಗ್ಲಿಯ ಸಾವಳಜದ ಹನಮಂತ ವಾಂಡರೆ, ಆಸ್ವಾದದ ಭರತ ಕಾಟಕರ ಹಾಗೂ ಸಾತಾರ ಜಿಲ್ಲೆಯ ಪೊಸೇಗಾಂವ-ವೀಸಾಪುರದ ಸೂರಜ್ ಬೂದಾವಲೆ ಅವರ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭವಾಗಿದೆ.

ಮುಖ್ಯ ಆರೋಪಿ ವಿಜಯ ಜಾವೀರನ ವಿರುದ್ಧವೇ ಈಗಾಗಲೇ ಕೊಲೆ, ಡಕಾಯಿತಿ, ಸುಲಿಗೆ ಸೇರಿ 11 ಪ್ರಕರಣಗಳು ದಾಖಲಾಗಿವೆ. ಉಳಿದವರ ಮೇಲೂ ವಿವಿಧ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದಿಂದ ಕಂಟ್ರಿ ಪಿಸ್ತೂಲ್‌ಗಳು ರಾಜ್ಯಕ್ಕೆ ಬರುವ ಸುಳಿವು ಸಿಕ್ಕಿದ್ದು, ಅವು ಹೇಗೆ ಹರಿದು ಬರುತ್ತಿವೆ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ಎಸ್‌ಪಿ ವಿವರಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...

ಬೆಳಗಾವಿ | ಹತ್ತರಗಿ ಟೋಲ್ ಬಳಿ ಹೆದ್ದಾರಿ ಬಂದ್ ತೆರವು: ವಾಹನ ಸಂಚಾರ ಪುನರಾರಂಭ

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಬಂದ್‌ ಆಗಿದ್ದ ಪುಣೆ-ಬೆಂಗಳೂರು ರಾಷ್ಟ್ರೀಯ...