ಬೆಳಗಾವಿ | ಬಸವ ಜಯಂತಿ 2026: ಬಸವರಾಜ ರೊಟ್ಟಿ ಮುಖ್ಯ ಸಂಚಾಲಕರಾಗಿ ಆಯ್ಕೆ

Date:

ಲಿಂಗಾಯತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ನಡೆಯಲಿರುವ 2026ರ ಬಸವ ಜಯಂತಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಬೆಳಗಾವಿ ನಗರದ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಮಾ.24ರಂದು ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು.

- Advertisement -

ಈ ಸಭೆಯಲ್ಲಿ ಉತ್ಸವದ ಮುಖ್ಯ ಸಂಚಾಲಕರಾಗಿ ನ್ಯಾಯವಾದಿ ಬಸವರಾಜ್ ರೊಟ್ಟಿ ಅವರನ್ನು ಆಯ್ಕೆ ಮಾಡಲಾಗಿದ್ದು, ಸಹ ಸಂಚಾಲಕರಾಗಿ ವಿವಿಧ ಲಿಂಗಾಯತ ಸಂಘಟನೆಗಳ ಪ್ರಮುಖರನ್ನು ನೇಮಕ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸಹ ಸಂಚಾಲಕರಾಗಿ ರತ್ನಪ್ರಭಾ ಬೆಲ್ಲದ (ವೀರಶೈವ ಲಿಂಗಾಯತ ಮಹಾಸಭಾ), ಈರಣ್ಣ ದಯನ್ನವರ್ (ಲಿಂಗಾಯತ ಸಂಘಟನೆ), ಅಶೋಕ್ ಬಂಡಿಗೇರಿ (ರಾಷ್ಟ್ರೀಯ ಬಸವದಳ), ಡಾ. ಎಸ್.ಎಂ. ದೊಡಮನ (ಲಿಂಗಾಯತ ಸೇವಾ ಸಮಿತಿ), ಎಸ್.ಜಿ. ಸಿದ್ದಾಳ್‌ (ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘ), ಕಿರಣ್ ಅಗಡಿ (ಲಿಂಗಾಯತ ಬಿಸಿನೆಸ್ ಫೋರಂ), ಮಹಾಂತೇಶ್ ಗುಡಸ್‌ (ಲಿಂಗಾಯತ ಧರ್ಮ ಮಹಾಸಭಾ), ರಮೇಶ್ ತುಬಚಿ (ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್) ಹಾಗೂ ಸೂರ್ಯಕಾಂತ್ ಬಾವಿ (ಬಸವ ಕಾಯಕ ಜೀವಿಗಳ ಸಂಘ) ಸೇರಿದಂತೆ ಒಟ್ಟು ಹತ್ತು ಸದಸ್ಯರ ಸಂಚಾಲಕ ಮಂಡಳಿಯನ್ನು ರಚಿಸಲಾಗಿದೆ.

ಸಭೆಯಲ್ಲಿ ಬಸವ ಜಯಂತಿಯನ್ನು ಪ್ರತಿ ವರ್ಷದಂತೆ ಶ್ರದ್ಧಾ-ಭಕ್ತಿಯಿಂದ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು.

ಪ್ರಮುಖ ಕಾರ್ಯಕ್ರಮಗಳು: ಎಪ್ರಿಲ್ 19ರಂದು

ಬೆಳಗ್ಗೆ 9 ಗಂಟೆಗೆ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಿಂದ ಭವ್ಯ ಬೈಕ್‌ ರ್ಯಾಲಿ ಆಯೋಜಿಸಲಾಗುವುದು. ಇದೇ ವೇಳೆ ಬಸವೇಶ್ವರ ವೃತ್ತದಲ್ಲಿ ಪ್ರತಿಷ್ಠಾಪಿಸಲಿರುವ 15 ಅಡಿ ಎತ್ತರದ ಬಸವಣ್ಣನವರ ಮೂರ್ತಿಯ ಭವ್ಯ ಮೆರವಣಿಗೆಯನ್ನು ಬಸವೇಶ್ವರ ಉದ್ಯಾನವನದಿಂದ ಗೋವಾವೇಸ್‌ನ ಬಸವೇಶ್ವರ ಸರ್ಕಲ್‌ವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ಇದಲ್ಲದೆ, ಸಮಾಜದ ಎಲ್ಲರಿಗೂ ಭಾಗವಹಿಸಲು ಅನುಕೂಲವಾಗುವಂತೆ ಎಪ್ರಿಲ್ 26ರಂದು (ರವಿವಾರ) ಸಂಜೆ 4 ಗಂಟೆಗೆ ರಾಣಿ ಚೆನ್ನಮ್ಮ ವೃತ್ತದಿಂದ ನಗರದಾದ್ಯಂತ ಮಹಾ ಮೆರವಣಿಗೆ ನಡೆಸಲಾಗುವುದು.

ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನೆರವೇರಿಸಲು ಹಣಕಾಸು, ಪ್ರಚಾರ, ಮೆರವಣಿಗೆ, ಪ್ರಸಾದ ದಾಸೋಹ ಹಾಗೂ ಸಾರಿಗೆ ಸಂಪರ್ಕ ಸೇರಿದಂತೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದೆ.

ಸಭೆಯ ಕೊನೆಯಲ್ಲಿ ಸಂಚಾಲಕ ಬಸವರಾಜ್ ರೊಟ್ಟಿ ಅವರು ಮಾತನಾಡಿ, ಬಸವ ಜಯಂತಿ ಉತ್ಸವವನ್ನು ಯಶಸ್ವಿಗೊಳಿಸಲು ಸಮಾಜದ ಎಲ್ಲಾ ಬಾಂಧವರ ಸಹಕಾರವನ್ನು ಕೋರಿದರು.

ಈ ಸಭೆಯಲ್ಲಿ ಬೆಳಗಾವಿ ಮಹಾನಗರದ ವಿವಿಧ ಲಿಂಗಾಯತ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ನಗರ ಸೇವಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...