ಬೆಳಗಾವಿ | ಬಸವರಾಜ ಕಟ್ಟಿಮನಿ ಬದುಕು-ಬರಹ ಮಲಾಮರಡಿಗೆ ಅಸ್ಮಿತೆ: ಡಾ. ಗುರುಪಾದ ಮರೇಗುದ್ದಿ

Date:

ಕುವೆಂಪು ಅವರಿಂದ ಕುಪ್ಪಳಿ, ಬೇಂದ್ರೆ ಅವರಿಂದ ಧಾರವಾಡ ಹೆಸರುವಾಸಿಯಾದಂತೆ, ಬಸವರಾಜ ಕಟ್ಟಿಮನಿಯವರಿಂಧ ಮಲಾಮರಡಿಗೆ ಒಂದು ಅಸ್ಮಿತೆ ಪ್ರಾಪ್ತವಾಗಿದೆ ಎಂದು ಹಿರಿಯ ಸಾಹಿತಿ ಡಾ.ಗುರುಪಾದ ಮರೇಗುದ್ದಿ ಅಭಿಪ್ರಾಯಪಟ್ಟರು. ಬೆಳಗಾವಿ

- Advertisement -

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮಲಾಮರಡಿಯಲ್ಲಿ ಬಸವರಾಜ ಕಟ್ಟಿಮನಿ ಪ್ರತಿಷ್ಠಾನವು ಗ್ರಾಮಸ್ಥರ ಸಹಯೋಗದೊಂದಿಗೆ ಏರ್ಪಡಿಸಿದ್ದ ಕಟ್ಟಿಮನಿ ಸ್ಮರಣ ದಿನದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದ ಅವರು, ಅನಿಶ್ಚಿತ ಉದ್ಯೋಗ ಹಾಗೂ ಕಡುಬಡತನದ ನಡುವೆಯೂ ಬಸವರಾಜ ಕಟ್ಟಿಮನಿ ಅವರು ಯಾರಿಗೂ ಡೊಗ್ಗು ಸಲಾಮು ಹಾಕದೆ ಬದುಕಿದರು. ಶರಣರ ‘ನ್ಯಾಯ ನಿಷ್ಠುರಿ, ದಾಕ್ಷಿಣ್ಯಪರ ನಾನಲ್ಲ’ ಎಂಬ ವಚನಕ್ಕೆ ಅನ್ವರ್ಥವಾಗಿದ್ದರು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇನ್ನೊಬ್ಬರ ನೋವಿಗೆ ಮಿಡಿಯುವುದು, ಸಮಾಜಕ್ಕಾಗಿ ದುಡಿಯುವುದು ಅಂದಿನ ಕಾಲದ ಮೌಲ್ಯಗಳಾಗಿದ್ದವು. ಹೀಗಾಗಿ ಬಸವರಾಜ ಕಟ್ಟಿಮನಿ ಅವರು ಸ್ವಾತಂತ್ರ್ಯ ಚಳವಳಿಯಲ್ಲಿಯೂ ಭಾಗವಹಿಸಿ ಜೈಲು ಅನುಭವಿಸಿದ್ದರು. ತಮ್ಮ ಅನುಭವಗಳ ಆಧಾರದಲ್ಲಿ ಅವರು ಬರೆದ ‘ಮಾಡಿ ಮಡಿದವರು’ ಕಾದಂಬರಿ ಕನ್ನಡದ ಶ್ರೇಷ್ಠ ಕಾದಂಬರಿಗಳ ಸಾಲಿಗೆ ಸೇರುತ್ತದೆ ಎಂದು ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರತಿಷ್ಠಾನದ ಸದಸ್ಯ ಪ್ರೊ. ಎಸ್.ಜಿ. ಚಿಕ್ಕನರಗುಂದ, ಮಲಾಮರಡಿಯಲ್ಲಿರುವ ಕಟ್ಟಿಮನಿ ಸಭಾಂಗಣದಲ್ಲಿ ಅವರ ಸಮಗ್ರ ಸಾಹಿತ್ಯ ಓದುಗರಿಗೆ ಲಭ್ಯವಾಗುವ ವ್ಯವಸ್ಥೆಯನ್ನು ಪ್ರತಿಷ್ಠಾನ ಮಾಡಲಿದೆ ಎಂದರು.

ಕಾರ್ಯಕ್ರಮದಲ್ಲಿ ಬಸವರಾಜ ಕಟ್ಟಿಮನಿ ಅವರ ಭಾವಚಿತ್ರ ಹಾಗೂ ಪುತ್ಥಳಿಗೆ ಪುಷ್ಪನಮನ ಸಲ್ಲಿಸಲಾಯಿತು. ಗ್ರಾಮದ ಹಿರಿಯರಾದ ಎನ್‌.ಎ. ನಿರ್ವಾಣಿ, ಈರಪ್ಪ ಮಾಳಗಿ, ಗಂಗಪ್ಪ ಅಂಗಡಿ, ವೀರೂಪಾಕ್ಷ ಅಂಗಡಿ ಹಾಗೂ ಕಟ್ಟಿಮನಿ ಅವರ ಪುತ್ರಿ ನೀಲಾ ಮಾಳಗಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಪ್ರಾಂಶುಪಾಲ ಎಂ.ಎನ್. ಮಾವಿನಕಟ್ಟಿ ಸ್ವಾಗತಿಸಿದರು. ಪ್ರತಿಷ್ಠಾನದ ಸದಸ್ಯ ವಿಠಲ ದಳವಾಯಿ ಕಾರ್ಯಕ್ರಮ ನಿರ್ವಹಿಸಿದರು. ಸದಸ್ಯೆ ಹಮೀದಾ ಬೇಗಂ ದೇಸಾಯಿ ವಂದಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಿತ್ತೂರು ತಲುಪುವ ಮುನ್ನವೇ ರೈತರೊಂದಿಗೆ ಡಿ.ಕೆ.ಶಿವಕುಮಾರ ಮಾತುಕತೆ

ಕಬ್ಬಿಗೆ ಸೂಕ್ತ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...