ಬೆಳಗಾವಿ | ರೈತನ ಮೇಲೆ ಕರಡಿ ದಾಳಿ : ಗಂಭೀರ ಗಾಯ

Date:

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಸಮೀಪದ ಹುಳಂದ ಗ್ರಾಮದಲ್ಲಿ ಕರಡಿ ದಾಳಿಗೆ ಯುವ ರೈತನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.ಹುಳಂದ ಗ್ರಾಮದ ನಿವಾಸಿ ಮಹೇಶ್ ಗಾವಡೆ (25) ಗಾಯಗೊಂಡ ರೈತ. ಅವರು ಎಂದಿನಂತೆ ತಮ್ಮ ಹಸುವನ್ನು ಮೇಯಿಸಲು ಗ್ರಾಮದ ಸಮೀಪದ ಅರಣ್ಯ ಪ್ರದೇಶಕ್ಕೆ ತೆರಳಿದ್ದರು. ದಿನವಿಡೀ ದನ ಮೇಯಿಸಿ ಸಂಜೆ ವೇಳೆಗೆ ಮನೆಗೆ ಮರಳುತ್ತಿದ್ದ ಸಂದರ್ಭದಲ್ಲಿ ಪೊದೆಯೊಳಗಿಂದ ಏಕಾಏಕಿ ಬಂದ ಕರಡಿಯೊಂದು ಅವರ ಮೇಲೆ ದಾಳಿ ನಡೆಸಿದೆ.

- Advertisement -
1001913404

ಪ್ರಾಣ ಉಳಿಸಿಕೊಳ್ಳಲು ಮಹೇಶ್ ಸಮೀಪದಲ್ಲಿದ್ದ ಮರವನ್ನು ಹತ್ತಲು ಯತ್ನಿಸಿದ್ದಾರೆ. ಆದರೆ ಅವರನ್ನು ಹಿಂಬಾಲಿಸಿದ ಕರಡಿ, ಮರ ಹತ್ತುವಷ್ಟರಲ್ಲೇ ಕಾಲನ್ನು ಗಟ್ಟಿಯಾಗಿ ಕಚ್ಚಿ ಎಳೆದಿದೆ. ಕರಡಿಯ ಭೀಕರ ದಾಳಿಯಿಂದಾಗಿ ಅವರ ಕಾಲಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹೇಶ್ ಅವರನ್ನು ಸ್ಥಳೀಯರು ರಕ್ಷಿಸಿ ತಕ್ಷಣ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...