ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಗೋರವನಕೊಪ್ಪ ಗ್ರಾಮದ ನಿವಾಸಿ ಮಂಜು ಯಲ್ಲಪ್ಪ ಕಮತರ (35) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮುನವಳ್ಳಿಯಿಂದ ಸವದತ್ತಿ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಎದುರಿನಿಂದ ಸವದತ್ತಿಯಿಂದ ಮುನವಳ್ಳಿ ಕಡೆಗೆ ಬರುತ್ತಿದ್ದ ಮಹಿಂದ್ರಾ ಥಾರ್ ವಾಹನದೊಂದಿಗೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸವದತ್ತಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.



