ಬೆಳಗಾವಿ | ನಿಂತಿದ್ದ ಟ್ರಕ್‌ಗೆ ಬೈಕ್ ಡಿಕ್ಕಿ: ಸವಾರ ಸಾವು

Date:

ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಬೈಕ್‌ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

- Advertisement -

ಅಥಣಿ ಶಿವಾಜಿ ಸರ್ಕಲ್ ನಿವಾಸಿ ಅಪ್ಪಾಸಾಹೇಬ ಲಕ್ಷ್ಮಣ ನರೋಡೆ (43) ಮೃತಪಟ್ಟವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಶಿನ್ನಾಳ ಡಾಂಬರ ರಸ್ತೆಯಲ್ಲಿರುವ ಸ್ವಾಗತ ಹೋಟೆಲ್ ಸಮೀಪ ರಾತ್ರಿ ಸುಮಾರು 7.30ರ ವೇಳೆಗೆ ಅಪ್ಪಾಸಾಹೇಬ ಅವರು ಹೀರೋ ಎಚ್‌ಎಫ್ ಡಿಲಕ್ಸ್ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆ ಮೇಲೆ ನಿಂತಿದ್ದ ಟಾಟಾ ಗೂಡ್ಸ್ ಕ್ಯಾರಿಯರ್ ಟ್ರಕ್‌ಗೆ ಬೈಕ್‌ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಅಪ್ಪಾಸಾಹೇಬ ಅವರ ಮುಖ ಹಾಗೂ ತಲೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆ ಕುರಿತು ಮಾಹಿತಿ ಪಡೆದ ಅಥಣಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಯರಗಟ್ಟಿ ಬಸ್‌ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಸಚಿವ ಸತೀಶ ಜಾರಕಿಹೊಳಿಯವರಿಗೆ ಕರವೇ ಮನವಿ

ಬೆಳಗಾವಿ ಜಿಲ್ಲೆಯ ಯರಗಟ್ಪಿ ಪಟ್ಟಣದ ಬಸ್‌ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸಿ, ಸಾರ್ವಜನಿಕರು...

ಬೆಳಗಾವಿ | ರಾಣಿ ಚೆನ್ನಮ್ಮ ವಿವಿ ಶುಲ್ಕ ಹೆಚ್ಚಳ: ವಿದ್ಯಾರ್ಥಿಗಳ ಮೇಲೆ ಹೆಚ್ಚಿದ ಆರ್ಥಿಕ ಹೊರೆ

ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಕಾಲೇಜು ಪ್ರವೇಶಾತಿ ಹಾಗೂ ಸೆಮಿಸ್ಟರ್...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...