ಬೆಳಗಾವಿ | ಮನೆ ಬಾಗಿಲಿಗೇ ಜನನ ಮರಣ ಪ್ರಮಾಣ ಪತ್ರ

Date:

ಸಾರ್ವಜನಿಕರು ಬೆಳಗಾವಿ ಮಹಾನಗರ ಪಾಲಿಕೆಯಿಂದ ಪಡೆಯುವ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಇನ್ನು ಮುಂದೆ ಅಂಚೆ ಇಲಾಖೆ ಮೂಲಕ ಮನೆ ಬಾಗಿಲಲ್ಲೇ ಪಡೆಯಬಹುದಾಗಿದೆ.

- Advertisement -

ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಹಾಗೂ ಅಂಚೆ ಇಲಾಖೆಯ ಬೆಳಗಾವಿ ವಿಭಾಗದ ಹಿರಿಯ ಅಧೀಕ್ಷಕಿ ಆರುಷಿ ಶರ್ಮಾ ಅವರು ಪಾಲಿಕೆ ಹಾಗೂ ಅಂಚೆ ಇಲಾಖೆ ನಡುವಿನ ಒಪ್ಪಿಗೆ ಪತ್ರಕ್ಕೆ ಸಹಿ ಹಾಕುವ ಮೂಲಕ ಪರಸ್ಪರ ಎಂಒಯು ಒಡಂಬಡಿಕೆ ಮಾಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ನಂತರ ಮಾತನಾಡಿದ ಪಾಲಿಕೆ ಆಯುಕ್ತ ಕಾರ್ತಿಕ್ ಎಂ., ಸಾರ್ವಜನಿಕರು ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯಲು ಪಾಲಿಕೆಗೆ ಸಲ್ಲಿಸುವ ಅರ್ಜಿಯೊಂದಿಗೆ ಅಂಚೆ ಮೂಲಕ ಪ್ರಮಾಣ ಪತ್ರ ಪಡೆಯಲು ವಿಳಾಸ ಸಹಿತ ಒಪ್ಪಿಗೆ ಪತ್ರ ಸಲ್ಲಿಸಬೇಕು. ನಂತರ ಪಾಲಿಕೆಯ ಜನನ ಮತ್ತು ಮರಣ ಪ್ರಮಾಣ ಪತ್ರ ವಿತರಣಾ ವಿಭಾಗವು ಪ್ರಮಾಣ ಪತ್ರವನ್ನು ಅಂಚೆ ಮೂಲಕ ಅರ್ಜಿದಾರರ ಮನೆಗೆ ಕಳುಹಿಸಲಿದೆ. ಅಂಚೆ ಶುಲ್ಕ ಪಾವತಿಸಿ ಮನೆ ಬಾಗಿಲಲ್ಲೇ ಪ್ರಮಾಣ ಪತ್ರ ಪಡೆಯಬಹುದು ಎಂದು ತಿಳಿಸಿದರು.

ಈ ವ್ಯವಸ್ಥೆಯಿಂದ ಸಾರ್ವಜನಿಕರ ಸಮಯ ಹಾಗೂ ವೆಚ್ಚ ಉಳಿತಾಯವಾಗಲಿದೆ. ಪಾಲಿಕೆ ಮತ್ತು ಅಂಚೆ ಇಲಾಖೆ ಕಲ್ಪಿಸಿರುವ ಈ ಸೌಲಭ್ಯದ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಂಚೆ ಇಲಾಖೆಯ ಬೆಳಗಾವಿ ವಿಭಾಗದ ಹಿರಿಯ ಅಧೀಕ್ಷಕಿ ಆರುಷಿ ಶರ್ಮಾ, ಪಾಲಿಕೆಯ ಪರಿಸರ ವಿಭಾಗದ ಅಭಿಯಂತರ, ಜನನ-ಮರಣ ನೋಂದಣಾಧಿಕಾರಿ ಅಶೋಕಕುಮಾರ ಸಜ್ಜನ್, ಅಂಚೆ ಇಲಾಖೆ ಅಧಿಕಾರಿಗಳಾದ ಮಾರುತಿ ದೊಡಮನಿ, ಅನಂತಶಯನ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಡಚಿ ರೈಲು ಮಾರ್ಗ ಕಾಮಗಾರಿಗೆ ವೇಗ ನೀಡಿ; ರೈಲ್ವೆ ಹೋರಾಟಕ್ಕೆ ರೈತರೂ ಕೈಜೋಡಿಸಿ: ಕುತ್ಬುದ್ದೀನ್ ಖಾಜಿ

ದಶಕಗಳಿಂದ ಕುಂಟುತ್ತ ಸಾಗುತ್ತಿರುವ ಕುಡಚಿ ರೈಲು ಮಾರ್ಗದ ಕಾಮಗಾರಿಯನ್ನು ತ್ವರಿತಗೊಳಿಸಿ, ಯೋಜನೆಯನ್ನು...

ಬೆಳಗಾವಿ | ಸರ್ಕಾರದಲ್ಲಿ ಹಣ ಇಲ್ಲ, ಸಿಎಂ ಮಾತಿಗೆ ಒಪ್ಪದ ರೈತರು, ಸಾಲ ಮಾಡಿಯಾದರೂ ಕಬ್ಬಿಗೆ ಬೆಲೆ ನೀಡಿ: ಚೂನಪ್ಪ ಪೂಜೇರಿ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ...

ವಾಯವ್ಯ ಕರ್ನಾಟಕ‌ ಸಾರಿಗೆಗೆ ‘ಚೆನ್ನಮ್ಮ’ ಹೆಸರು ಮರುನಾಮಕರಣ: ಸಿಎಂ ಡಿ‌ಕೆ ಶಿವಕುಮಾರ್

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWKRTC) ವೀರರಾಣಿ ಕಿತ್ತೂರು ಚೆನ್ನಮ್ಮ...