ಬೆಳಗಾವಿ | ಜಮೀನಿನಲ್ಲಿ ಅಪರಚಿತ ವ್ಯಕ್ತಿಯ ಶವ ಪತ್ತೆ

Date:

ಬೆಳಗಾವಿ ಜಿಲ್ಲೆಯ ಕಿತ್ತೂರು ಸಮೀಪದ ಹಿರೇನಂದಿಹಳ್ಳಿ ಕ್ರಾಸ್ ಬಳಿ ಜಮೀನೊಂದರಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಬೆಳಕಿಗೆ ಬಂದಿದೆ.

- Advertisement -

ಅಂದಾಜು 45 ವರ್ಷದ ವ್ಯಕ್ತಿಯ ಶವವು ಸುಮಾರು 5 ರಿಂದ 6 ದಿನಗಳ ಹಿಂದೆ ಕೊಲೆ ಮಾಡಿ ಜಮೀನಿನಲ್ಲಿ ಎಸೆಯಲ್ಪಟ್ಟಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿಯ ವ್ಯಾಪ್ತಿಯ ಗೋವಿನ ಜೋಳದ ಜಮೀನಿನಲ್ಲಿ ಈ ಘಟನೆ ನಡೆದಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್, ಡಿವೈಎಸ್ಪಿ ವೀರಯ್ಯ ಹಿರೇಮಠ, ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್‌ಐ ಪ್ರವೀಣ ಗಂಗೊಳ್ಳ ಹಾಗೂ ಜಿ.ಜಿ. ಹಂಪಣ್ಣವರ ಘಟನಾ ಸ್ಥಳಕ್ಕೆ ಆಗಮಿಸಿ ಮಾಹಿತಿ ಸಂಗ್ರಹಿಸಿದರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಮೃತನ ಗುರುತು ಹಾಗೂ ಸಾವಿನ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ. ಈ ಕುರಿತು ಸಂಬಂಧಿತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅಲ್ಯೂಮಿನಿಯಂ ತಂತಿ ಕಳ್ಳರ ಬಂಧನ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಘಟಗಿ ಬಸವೇಶ್ವರ ನಗರದಲ್ಲಿ...

ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು...

ಬೆಳಗಾವಿ | ಎಂಎಸ್‌ಪಿ ಬೆಲೆ ₹60 ಹೆಚ್ಚಿಸುವುದಾದರೆ ಮಾತ್ರ ದೆಹಲಿಗೆ: ಚೂನಪ್ಪ ಪೂಜೇರಿ

ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಕೆ.ಜಿಗೆ ₹60ಕ್ಕೆ ಹೆಚ್ಚಿಸುವುದಾಗಿ ಕೇಂದ್ರ...