ಬೆಳಗಾವಿ | ಇನಾಮ್‌ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ : ಮೃತರ ಸಂಖ್ಯೆ 8ಕ್ಕೆ ಏರಿಕೆ, ರಸ್ತೆ ತಡೆ

Date:

ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮ್‌ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿಕಿತ್ಸೆ ಫಲಿಸದೆ ಇಂದು ಒಂದೇ ದಿನ ಐವರು ಕಾರ್ಮಿಕರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಇದರಿಂದಾಗಿ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

- Advertisement -

ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಈ ದುರ್ಘಟನೆ ನಡೆದಿದ್ದು, ವಿಕ್ರಮ ಇನಾಮ್‌ದಾರ್ ಸಕ್ಕರೆ ಕಾರ್ಖಾನೆಯಲ್ಲಿ ವಾಲ್ ದುರಸ್ತಿ ಕಾರ್ಯ ನಡೆಯುತ್ತಿದ್ದ ವೇಳೆ ಅಚಾನಕ್ ವಾಲ್ ಸ್ಫೋಟಗೊಂಡಿತ್ತು. ಪರಿಣಾಮ ಕುದಿಯುತ್ತಿದ್ದ ಕಬ್ಬಿನ ಹಾಲು ಕಾರ್ಮಿಕರ ಮೈಮೇಲೆ ಬಿದ್ದು ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಾಯಾಳುಗಳನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೊದಲಿಗೆ ಮೂವರು ಮೃತಪಟ್ಟಿದ್ದು, ಇದೀಗ ಚಿಕಿತ್ಸೆ ಫಲಿಸದೆ ಉಳಿದ ಐವರು ಮೃತಪಟ್ಟಿದ್ದಾರೆ.

ಅಕ್ಷಯ ತೋಪಡೆ, ದೀಪಕ್ ಮುನವಳ್ಳಿ, ಸುದರ್ಶನ ಬನೋಶಿ, ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದ ಮಂಜುನಾಥ ಮಡಿವಾಳಪ್ಪ ಕಾಜಗಾರ್, ಗೋಕಾಕ್ ತಾಲೂಕಿನ ಗೊಡಚಿನಮಲ್ಕಿ ಗ್ರಾಮದ ಭರತೇಶ ಸಾರವಾಡಿ, ಅಥಣಿ ತಾಲೂಕಿನ ತೇರದಾಳ ಪಟ್ಟಣದ ಮಂಜುನಾಥ ತೇರದಾಳ, ಬಾಗಲಕೋಟ ಜಿಲ್ಲೆಯ ಮರೆಗುದ್ದಿ ಗ್ರಾಮದ ಗುರುಪಾದಪ್ಪ ತಮ್ಮನ್ನವರ್ ಹಾಗೂ ಬೆಳಗಾವಿ ಜಿಲ್ಲೆಯ ಗೋಕಾಕ್‌ನ ರಾಘವೇಂದ್ರ ಗಿರಿಯಾಲ (35) ಮೃತಪಟ್ಟವರು ಎಂದು ತಿಳಿದುಬಂದಿದೆ.

ಕಾರ್ಖಾನೆ ಆಡಳಿತದ ವಿರುದ್ಧ ಆಕ್ರೋಶ :

ಈ ಘಟನೆಗೆ ಸಂಬಂಧಿಸಿದಂತೆ ಮೃತ ಕಾರ್ಮಿಕರ ಕುಟುಂಬಸ್ಥರು ಸರ್ಕಾರ ಹಾಗೂ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಪರಿಹಾರ ಘೋಷಣೆ ಆಗದ ಹಿನ್ನೆಲೆಯಲ್ಲಿ ಮೃತದೇಹ ಕೊಂಡೊಯ್ಯುವುದಿಲ್ಲ ಎಂದು ಪಟ್ಟು ಹಿಡಿದು ಬೈಲಹೊಂಗಲದಲ್ಲಿ ರಸ್ತೆ ತಡೆ ನಡೆಸಿದರು.

ಮೃತ ಎಲ್ಲ ಕಾರ್ಮಿಕರ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಬೇಕೆಂದು ಕುಟುಂಬಸ್ಥರು ಹಾಗೂ ರೈತ ಮುಖಂಡರು ಆಗ್ರಹಿಸಿದ್ದು, ಬಡವರ ಮಕ್ಕಳ ಸಾವಿಗೆ ಬೆಲೆ ಇಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...

ಬೆಳಗಾವಿ | ಹತ್ತರಗಿ ಟೋಲ್ ಬಳಿ ಹೆದ್ದಾರಿ ಬಂದ್ ತೆರವು: ವಾಹನ ಸಂಚಾರ ಪುನರಾರಂಭ

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಬಂದ್‌ ಆಗಿದ್ದ ಪುಣೆ-ಬೆಂಗಳೂರು ರಾಷ್ಟ್ರೀಯ...