ಬೆಳಗಾವಿ | ಪುಸ್ತಕಗಳು ಪ್ರತಿಷ್ಠೆಯ ವಸ್ತುವಾಗಬೇಕು: ಡಾ. ಮಾನಸ

Date:

ಪುಸ್ತಕಗಳು ನಾಗರಿಕ ಬದುಕಿನ ಪ್ರತಿಷ್ಠೆಯ ವಸ್ತುವಾಗಬೇಕು. ಪ್ರತಿ ಮನೆಯಲ್ಲೂ ಗ್ರಂಥಾಲಯ ಇರಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಹೇಳಿದರು.

- Advertisement -

ಬೆಳಗಾವಿ ನಗರದ ಮಹಾಂತೇಶ ನಗರದಲ್ಲಿನ ಹಿರಿಯ ಸಾಹಿತಿ ಡಾ. ಗುರುದೇವಿ ಹುಲೆಪ್ಪನವರಮಠ ಅವರ ಸ್ವಗೃಹದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಜಿಲ್ಲಾ ಜಾಗೃತಿ ಸಮಿತಿ ಆಯೋಜಿಸಿದ್ದ ‘ಮನೆಗೊಂದು ಗ್ರಂಥಾಲಯ’ ಯೋಜನೆಯ ಅನುಷ್ಠಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ರಂಥಾಲಯವೆಂದರೆ ಕೇವಲ ಪುಸ್ತಕಗಳ ಸಂಗ್ರಹವಲ್ಲ. ಅದು ಮನೆಯ ಸತ್ವದಂತಿದೆ. ಶಾಲೆ, ಕಾಲೇಜು, ಊರು ಹಾಗೂ ನಗರಗಳಲ್ಲಿ ಗ್ರಂಥಾಲಯಗಳಿದ್ದರೆ ಅವು ಜೀವಂತಿಕೆಯಿಂದ ಕೂಡಿವೆ ಎಂದರ್ಥ. ಜ್ಞಾನಸಂಪನ್ನ ಗ್ರಂಥಗಳು ಗ್ರಂಥಾಲಯಕ್ಕೆ ಘನತೆ ತರುತ್ತವೆ. ಅಂತಹ ಗ್ರಂಥಾಲಯಗಳು ಪ್ರತಿ ಮನೆಯಲ್ಲೂ ಇರಬೇಕು. ಅವು ಮೂಲಭೂತ ಅವಶ್ಯಕತೆಗಳಲ್ಲಿ ಒಂದೆಂದು ಜನರು ಭಾವಿಸಬೇಕು ಎಂದರು.

ಮಕ್ಕಳಿಗೆ ನೀತಿ ಪಾಠ ಹೇಳುವುದಕ್ಕಿಂತ ನಮ್ಮ ಬದುಕಿನ ರೀತಿಯೇ ಅವರನ್ನು ಬೆಳೆಸುತ್ತದೆ. ಈ ಉದ್ದೇಶದಿಂದ ಪುಸ್ತಕ ಪ್ರಾಧಿಕಾರ ‘ಮನೆಗೊಂದು ಗ್ರಂಥಾಲಯ’ ಯೋಜನೆ ಅನುಷ್ಠಾನಗೊಳಿಸುತ್ತಿದ್ದು, ಕನಿಷ್ಠ ಒಂದು ಲಕ್ಷ ಮನೆಗಳಲ್ಲಿ ಗ್ರಂಥಾಲಯ ಸ್ಥಾಪಿಸುವ ಗುರಿ ಹೊಂದಿದೆ ಎಂದು ತಿಳಿಸಿದರು.

ಸಾಹಿತಿ ಸುನಂದಾ ಎಮ್ಮಿ ಮಾತನಾಡಿ, ಡಾ. ಗುರುದೇವಿ ಹುಲೆಪ್ಪನವರಮಠ ಅವರ ಕುಟುಂಬದ ಬದುಕಿನ ರೀತಿಯಲ್ಲಿ ಶರಣರ ಬದುಕಿನ ದರ್ಶನವಾಗುತ್ತದೆ. ಅವರ ಸಾಹಿತ್ಯ ತಿಳಿನೀರಿನ ಸಿಹಿ ಸರೋವರದಂತಿದ್ದು, ಕನ್ನಡ ಸಾಹಿತ್ಯಕ್ಕೆ ಅವರು ಸಲ್ಲಿಸಿರುವ ಸೇವೆ ಅನುಪಮವಾಗಿದೆ ಎಂದರು.

ಡಾ. ಗುರುದೇವಿ ಅವರ ಮನೆಯಲ್ಲಿ ಯೋಜನೆ ಅನುಷ್ಠಾನಗೊಳಿಸಿರುವುದು ಪುಸ್ತಕ ಪ್ರಾಧಿಕಾರ ಅವರಿಗೆ ಸಲ್ಲಿಸಿದ ಗೌರವದ ಪ್ರತೀಕವಾಗಿದೆ ಎಂದು ಹೇಳಿದರು.

ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಡಾ. ಕುಶಾಲ್ ಬರಗೂರು ಆಶಯ ನುಡಿಗಳನ್ನಾಡಿದರು. ಜಿಲ್ಲಾ ಜಾಗೃತಿ ಸಮಿತಿ ಸದಸ್ಯೆ ಡಾ. ಕವಿತಾ ಕುಸುಗಲ್ ಅತಿಥಿಯಾಗಿ ಭಾಗವಹಿಸಿದ್ದರು. ಮನೆಯಲ್ಲಿ ಗ್ರಂಥಾಲಯ ಸ್ಥಾಪಿಸಿದ್ದಕ್ಕಾಗಿ ಡಾ. ಗುರುದೇವಿ ಅವರಿಗೆ ಪುಸ್ತಕ ಪ್ರಾಧಿಕಾರದ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಅಧ್ಯಕ್ಷ ಡಾ. ಯಲ್ಲಪ್ಪ ಹಿಮ್ಮಡಿ ಅಧ್ಯಕ್ಷತೆ ವಹಿಸಿದ್ದರು. ಶಾಂತಾದೇವಿ ಹುಲೆಪ್ಪನವರಮಠ, ಅಕ್ಕಮಹಾದೇವಿ ತೆಗ್ಗಿ, ಶಿವಯೋಗಿ ಕುಸುಗಲ್, ಗಂಗಾದೇವಿ ಕುಸುಗಲ್, ಪ್ರಭಾ ಪಾಟೀಲ, ರಿತೇಶ ಹೆಜ್ಜೆ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಡಾ. ಸಂತೋಷ ನಾಯಿಕ ಸ್ವಾಗತಿಸಿದರು. ಶಿವಪ್ರಸಾದ ಹುಲೆಪ್ಪನವರಮಠ ವಂದಿಸಿದರು. ವಿನಾಯಕ ನಂದಿ ನಿರೂಪಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಬೆಳಗಾವಿ | ಕುರಿ ಕಳ್ಳತನ: ಮೂವರು ಬಂಧನ

ಬೆಳಗಾವಿ ನಗರದ ಭಾಗ್ಯನಗರದಲ್ಲಿ 10 ಕುರಿಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ತಿಲಕವಾಡಿ...

ಬೆಳಗಾವಿ | ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಹೊರವಲಯದಲ್ಲಿ ಶನಿವಾರ ರಾತ್ರಿ...