ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂ ಗ್ರಾಮದ ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಬಾಲಕ ನಾಪತ್ತೆಯಾಗಿದ್ದು, ಎರಡು ದಿನಗಳ ಶೋಧ ಕಾರ್ಯಾಚರಣೆ ಬಳಿಕ ಬಾಲಕನ ಶವ ಪತ್ತೆಯಾಗಿದೆ.
ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದ ಮನೋಜ ಲಕ್ಷ್ಮಣ ನಾಯಕ (15) ಸಾವಿಗೀಡಾದ ಬಾಲಕ ಎಂದು ತಿಳಿದು ಬಂದಿದೆ. ಕೊಣ್ಣೂರ ದುಪಧಾಳ ಸೇತುವೆ ಕೆಳಗಿರುವ ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಹೋಗಿದ್ದ. ಅಗ್ನಿ ಶ್ಯಾಮಕ ದಳದ ಅಧಿಕಾರಿ ಮತ್ತು ಸಿಬ್ಬಂದಿ ಹುಡುಕಾಟ ನಡೆಸಿದಾಗ ಮುಳುಗಿ ಹೋಗಿದ್ದ ಬಾಲಕನ ಶವ ಸಿಕ್ಕಿದೆ.
ಇನ್ನು ಮೃತ ಯುವಕ ಕೊಣ್ಣೂರಿನ ರೇಲ್ವೆ ಸ್ಟೇಷನ್ (ಗೋಕಾಕ ರೋಡ್‌ನ) ನಿವಾಸಿ ಎಂದು ತಿಳಿದು ಬಂದಿದ್ದು, ಮಗನ ಸಾವಿನಿಂದ ಕುಟುಂಬಸ್ಥರ, ಗೆಳೆಯರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ, ಸಿಬ್ಬಂದಿ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದಾರೆ.