ಬೆಳಗಾವಿ | ಗಾಂಧಿನಗರದಲ್ಲಿ ಮಹಿಳೆ ಮೇಲೆ ಕ್ರೂರ ಹಲ್ಲೆ : ಮಾನವೀಯತೆಯೇ ತಲೆ ತಗ್ಗಿಸುವ ಘಟನೆ

Date:

ವದಂತಿಯ ಆಧಾರದಲ್ಲಿ ಮಹಿಳೆಯೊಬ್ಬರ ಮೇಲೆ ಅಮಾನವೀಯ ಹಲ್ಲೆ ನಡೆದ ಘಟನೆ ಬೆಳಗಾವಿ ನಗರದ ಹೊಸ ಗಾಂಧಿನಗರದಲ್ಲಿ ಶನಿವಾರ ಸಂಭವಿಸಿದೆ. ಮಕ್ಕಳ ಕಳ್ಳಿಯಾಗಿದ್ದಾಳೆ ಎಂಬ ಅನುಮಾನಕ್ಕೆ ಜನರು ಆಕೆಯನ್ನು ಹಿಗ್ಗಾಮುಗ್ಗಾ ಥಳಿಸಿ, ಬಟ್ಟೆ ಹರಿದು ಅವಮಾನಪಡಿಸಿದ ಘಟನೆ ಕೆಲಕಾಲ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣಕ್ಕೆ ಕಾರಣವಾಯಿತು.

- Advertisement -

ಸುಮಾರು 35 ವರ್ಷ ವಯಸ್ಸಿನ ಮಹಿಳೆ ರಂಜಾನ್‌ ಮಾಸದ ಅಂಗವಾಗಿ ಮುಸ್ಲಿಮರ ವಸತಿ ಪ್ರದೇಶದಲ್ಲಿ ಭಿಕ್ಷೆ ಬೇಡುತ್ತಿದ್ದರು. ಬಿಸಿಲಿನ ತಾಪದಿಂದ ಹತ್ತಿರದ ಕಟ್ಟಡವೊಂದರ ಮುಂದೆ ಕುಳಿತಿದ್ದ ವೇಳೆ, ಕೆಲ ಮಹಿಳೆಯರು ಅನುಮಾನ ವ್ಯಕ್ತಪಡಿಸಿ ಪುರುಷರಿಗೆ ಮಾಹಿತಿ ನೀಡಿದ್ದಾರೆ. “ಮಕ್ಕಳನ್ನು ಕಳ್ಳತನ ಮಾಡಲು ಬಂದಿದ್ದಾಳೆ” ಎಂದು ಕೂಗಿದ ಪರಿಣಾಮ, ಕೆಲವೇ ನಿಮಿಷಗಳಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಸ್ಥಳಕ್ಕೆ ಜಮಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಮಹಿಳೆಯನ್ನು ಎಳೆದಾಡಿ ಪ್ರಶ್ನಿಸಿದ ಗುಂಪು, ಆಕೆ ಎಷ್ಟು ಬೇಡಿಕೊಂಡರೂ ಬಿಡದೆ ಹೊಟ್ಟೆ, ಎದೆ, ಭುಜ, ತಲೆ ಹಾಗೂ ಮುಖಕ್ಕೆ ಗುದ್ದಿ, ಕಾಲಿನಿಂದ ಒದ್ದು ಕೆಳಗೆ ಕೆಡವಿದ್ದಾರೆ. ಕೆಲವರು ರವಿಕೆ ಹರಿದು ಓಡಿಸಿದರೆ, ಕೂದಲು ಹಿಡಿದು ಎಳೆದಾಡಿದ ಘಟನೆ ನಡೆದಿದೆ. ಪುರುಷರ ಜೊತೆಗೆ ಕೆಲ ಮಹಿಳೆಯರೂ ಹಲ್ಲೆಯಲ್ಲಿ ಭಾಗಿಯಾಗಿದ್ದು, ಸುತ್ತಮುತ್ತಲಿನ ಕೆಲವರು ಈ ದೃಶ್ಯಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿರುವುದು ತಿಳಿದುಬಂದಿದೆ.

ವದಂತಿಯ ಪರಿಣಾಮ

“ಬೆಳಗಾವಿಯಲ್ಲಿ ಮಕ್ಕಳನ್ನು ಕಳ್ಳತನ ಮಾಡುವವರ ತಂಡ ಓಡಾಡುತ್ತಿದೆ” ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿರುವುದರಿಂದ ಜನರಲ್ಲಿ ಭೀತಿ ಉಂಟಾಗಿದೆ. ಇದೇ ವದಂತಿಯ ಪರಿಣಾಮವಾಗಿ ಹಲ್ಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರ ಪೊಲೀಸ್ ಕಮಿಷನ‌ರ್ ಭೂಷಣ ಬೊರಸೆ ಮಾತನಾಡಿ, “ಮಹಿಳೆಯನ್ನು ವಿಚಾರಣೆ ನಡೆಸಿದ್ದು, ಆಕೆ ಮಕ್ಕಳ ಕಳ್ಳಿ ಅಲ್ಲ ಎಂಬುದು ಸ್ಪಷ್ಟವಾಗಿದೆ. ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ವಿಡಿಯೊಗಳನ್ನು ಪರಿಶೀಲಿಸಿ ಆರೋಪಿಗಳನ್ನು ಬಂಧಿಸಲಾಗುವುದು. ಜನರು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಪರೀಕ್ಷೆಗೆ ಸಿದ್ಧವಾಗಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಅಪರಿಶೀಲಿತ ಮಾಹಿತಿಯ ಪರಿಣಾಮ ಎಷ್ಟು ಗಂಭೀರವಾಗಿರಬಹುದು ಎಂಬುದನ್ನು ಮತ್ತೆ ಒತ್ತಿ ಹೇಳುತ್ತಿದೆ. ಅನುಮಾನಾಸ್ಪದ ಘಟನೆಗಳ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವುದು ಅಗತ್ಯವಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...