ಬೆಳಗಾವಿ | ಯಲ್ಲಮ್ಮನ ಗುಡ್ಡದಿಂದ ಮರಳುತ್ತಿರುವಾಗ ಗುಂಡಿಗೆ ಬಿದ್ದ ಎತ್ತಿನ ಚಕ್ಕಡಿ

Date:

ಭರತ ಹುಣ್ಣಿಮೆಯ ನಿಮಿತ್ತ ಸವದತ್ತಿಯ ಶ್ರೀ ರೆಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ತೆರಳಿ ಮರಳುತ್ತಿದ್ದ ಎತ್ತಿನ ಚಕ್ಕಡಿಯೊಂದು ರಸ್ತೆ ಪಕ್ಕದ ಗುಂಡಿಗೆ ಬಿದ್ದು ಎತ್ತುಗಳಿಗೆ ಗಾಯವಾದ ಘಟನೆ ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದ ಸಮೀಪ ನಡೆದಿದೆ.

- Advertisement -

ಭರತ ಹುಣ್ಣಿಮೆಯ ಹಿನ್ನೆಲೆಯಲ್ಲಿ ಯಲ್ಲಮ್ಮನ ಗುಡ್ಡಕ್ಕೆ ನೂರಾರು ಎತ್ತಿನ ಚಕ್ಕಡಿಗಳು ತೆರಳುವ ಹಾಗೂ ಮರಳುವ ದೃಶ್ಯ ಅತ್ಯಂತ ಆಕರ್ಷಕವಾಗಿರುತ್ತದೆ. ಆದರೆ ಈ ಸಂದರ್ಭದಲ್ಲಿ ಕೆಲ ಚಕ್ಕಡಿ ಮಾಲೀಕರ ಅಜಾಗರೂಕತೆ ಮೂಕ ಪ್ರಾಣಿಗಳಿಗೆ ತೊಂದರೆಯಾಗುತ್ತಿರುವುದು ಕಂಡುಬರುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಶ್ರೀ ರೆಣುಕಾ ಯಲ್ಲಮ್ಮನ ಗುಡ್ಡದಿಂದ ಓಬಳಾಪೂರದ ಕಡೆಗೆ ತೆರಳುತ್ತಿದ್ದ ಚಕ್ಕಡಿಯನ್ನು ಅತಿವೇಗವಾಗಿ ಓಡಿಸಲಾಗಿತ್ತು ಎನ್ನಲಾಗಿದೆ. ಎತ್ತುಗಳನ್ನು ವೇಗವಾಗಿ ಓಡಿಸಲು ಬಾಲಕೋಲಿನಿಂದ ಹೊಡೆದ ಪರಿಣಾಮ ನೋವು ತಾಳಲಾರದೆ ಎತ್ತುಗಳು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗುಂಡಿಗೆ ಬಿದ್ದಿವೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇಂತಹ ಘಟನೆಗಳು ಮರುಕಳಿಸದಂತೆ ಚಕ್ಕಡಿಗಳನ್ನು ನಿಧಾನವಾಗಿ ಹಾಗೂ ಎಚ್ಚರಿಕೆಯಿಂದ ಓಡಿಸಬೇಕು. ಮೂಕ ಪ್ರಾಣಿಗಳ ಮೇಲಿನ ಕಾಳಜಿ ಅಗತ್ಯ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...