ಬೆಳಗಾವಿ ತಾಲೂಕಿನ ಬಡೇಕೊಳ್ಳಮಠದ ರಾಷ್ಟ್ರೀಯ ಹೆದ್ದಾರಿಯ ಘಾಟ ಬಳಿ ಗೋಗಟೆ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬುಧವಾರ ರಾತ್ರಿ ನಡೆದಿದೆ.
ಹುಬ್ಬಳ್ಳಿಯಿಂದ ಪುಣೆಯತ್ತ ಹೊರಟಿದ್ದ ಗೋಗಟೆ ಬಸ್ ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ದುರಂತ ಸಂಭವಿಸಿದೆ. ಅಪಘಾತದಲ್ಲಿ ಒಬ್ಬ ಮಹಿಳೆ ಹಾಗೂ ಒಬ್ಬ ಪುರುಷ ಸಾವನ್ನಪ್ಪಿದ್ದು, 11 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.