ಬೆಳಗಾವಿ | ಕಾರು ಡಿಕ್ಕಿ : ಬಿಜೆಪಿ ಮುಖಂಡ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವಿರೂಪಾಕ್ಷ ಮಾಮನಿಗೆ ಗಂಭೀರ ಗಾಯ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬಿಜೆಪಿ ಅಧ್ಯಕ್ಷ ಹಾಗೂ ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ವಿರೂಪಾಕ್ಷ ಮಾಮನಿ ಅವರು ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

- Advertisement -

ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದ ಸಮೀಪ ಈ ಘಟನೆ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿರೂಪಾಕ್ಷ ಮಾಮನಿ ಅವರು ಶೌಚಕ್ಕೆಂದು ವಾಹನ ನಿಲ್ಲಿಸಿ, ಕಾರಿನಿಂದ ಸ್ವಲ್ಪ ದೂರ ತೆರಳಿದ್ದರು. ಈ ವೇಳೆ ಬಂದ ಕಾರೊಂದು ಅವರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅಪಘಾತದ ಪರಿಣಾಮ ಮಾಮನಿ ಅವರ ತಲೆ, ಕಿವಿ ಹಾಗೂ ಮೂಗಿಗೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ತಕ್ಷಣ ಅವರನ್ನು ಸವದತ್ತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಸವದತ್ತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...

ಬೆಳಗಾವಿ | ಹತ್ತರಗಿ ಟೋಲ್ ಬಳಿ ಹೆದ್ದಾರಿ ಬಂದ್ ತೆರವು: ವಾಹನ ಸಂಚಾರ ಪುನರಾರಂಭ

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಬಂದ್‌ ಆಗಿದ್ದ ಪುಣೆ-ಬೆಂಗಳೂರು ರಾಷ್ಟ್ರೀಯ...

ಬೆಳಗಾವಿ | ಹತ್ತರಗಿಯಿಂದ ‘ಹುಬ್ಬಳ್ಳಿ ಚಲೋ’ ಪಾದಯಾತ್ರೆ ಆರಂಭ

ಕಬ್ಬಿಗೆ ಸೂಕ್ತ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಬ್ಬು...