ಬೆಳಗಾವಿ | ಕುರಿಗಳ ಹಿಂಡಿಗೆ ಕಾರು ಡಿಕ್ಕಿ: 48ಕ್ಕೂ ಹೆಚ್ಚು ಕುರಿಗಳ ಸಾವು, 15ಕ್ಕೂ ಹೆಚ್ಚು ಗಾಯ

Date:

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಜಾಲಿಕೊಪ್ಪ ಗ್ರಾಮದ ಸಮೀಪ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರೊಂದು ಕುರಿಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ 48ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಕುರಿಗಳು ಗಂಭೀರವಾಗಿ ಗಾಯಗೊಂಡಿವೆ.

- Advertisement -

ಬೈಲಹೊಂಗಲದಿಂದ ಬೆಳವಡಿ ಕಡೆಗೆ ಅತಿವೇಗದಲ್ಲಿ ಸಾಗುತ್ತಿದ್ದ ಕಾರು, ಜಾಲಿಕೊಪ್ಪ ಗ್ರಾಮದ ಸಮೀಪ ರಸ್ತೆ ದಾಟುತ್ತಿದ್ದ ಕುರಿಗಳ ಹಿಂಡಿನೊಳಗೆ ನುಗ್ಗಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಹಲವಾರು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದರೆ, ಗಾಯಗೊಂಡ ಕುರಿಗಳು ರಸ್ತೆಯಲ್ಲೇ ನರಳಾಡುತ್ತಿದ್ದ ದೃಶ್ಯ ಸ್ಥಳೀಯರ ಮನಕಲಕುವಂತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಅಪಘಾತದಲ್ಲಿ ಮೃತಪಟ್ಟ ಕುರಿಗಳು ಕೆಂಗಾನೂರು ಗ್ರಾಮದ ಚಂದ್ರಪ್ಪ ಹಿತ್ತಲಮನಿ ಹಾಗೂ ದೊಡ್ಡವಾಡ ಗ್ರಾಮದ ಬೀರಪ್ಪ ಅವರಿಗೆ ಸೇರಿದ್ದವು ಎಂದು ತಿಳಿದುಬಂದಿದೆ. ಹಲವಾರು ಗರ್ಭಿಣಿ ಕುರಿಗಳ ಹೊಟ್ಟೆ ಸೀಳಿ ಮರಿಗಳು ಹೊರಬಿದ್ದಿರುವ ದೃಶ್ಯ ಸ್ಥಳದಲ್ಲಿದ್ದವರ ಕಣ್ಣೀರಿಗೂ ಕಾರಣವಾಯಿತು.

ಘಟನೆಯಿಂದ ರಸ್ತೆ ತುಂಬ ಮೃತ ಹಾಗೂ ಗಾಯಗೊಂಡ ಕುರಿಗಳು ಬಿದ್ದಿದ್ದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಕುರಿಗಳ ಸಾವಿನಿಂದ ಮಾಲೀಕರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದ್ದು, ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ ಕಾರು ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.

ಅಪಘಾತದ ಬಳಿಕ ಕಾರು ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಮಾಹಿತಿ ತಿಳಿದು ಬೈಲಹೊಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾಗಿರುವ ಚಾಲಕನ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಕಲ್ಯಾಣ ಕರ್ನಾಟಕದಲ್ಲಿ 16.23 ಲಕ್ಷ ಮತದಾರರು ಔಟ್!

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು,...

ಕ್ಯಾಮೆರಾ ಆಫ್ ಆಗಿದೆ ಎಂದುಕೊಂಡು ಇಸ್ರೇಲ್ ನೀತಿ ಟೀಕೆ; ಲೈವ್ ಪ್ರಸಾರ ತಿಳಿದು ದಂಗಾದ ನಟಿ!

ದೇಶದ ನೀತಿಗಳ ಬಗ್ಗೆ ಸ್ವತಃ ಇಸ್ರೇಲ್‌ನಲ್ಲೇ ವಿರೋಧಿ ಧ್ವನಿಗಳು ಕೇಳಿಬರುತ್ತಿರುವುದು ತಿಳಿದೇ...

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...