ಬೆಳಗಾವಿ : ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ

Date:


ವಾಲ್ಮೀಕಿ ಸಮುದಾಯಕ್ಕೆ ಅವಹೇಳನಕಾರಿ ಪದಗಳನ್ನು ಬಳಸಿ ನಿಂದನೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಂಸದ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ ಕತ್ತಿ ವಿರುದ್ಧ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಭಾನುವಾರ ಬೆಳಗಾವಿ ನಗರದಲ್ಲಿ ನಡೆದ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಗಳ ಮತದಾನದ ವೇಳೆ ತಮ್ಮ ಬೆಂಬಲಿಗರೊಂದಿಗೆ ಮಾತನಾಡುತ್ತಿದ್ದಾಗ, ಜಾರಕಿಹೊಳಿ ಸಹೋದರರನ್ನು ಟೀಕಿಸುವ ಸಂದರ್ಭ ಕತ್ತಿ ಅವರು ವಾಲ್ಮೀಕಿ ಸಮುದಾಯದ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ಮಾತನಾಡಿದ್ದಾರೆ ಎಂಬುದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಘಟನೆಯ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದನ್ನು ಆಧಾರವನ್ನಾಗಿ ಮಾಡಿಕೊಂಡು ಸಮಾಜದ ಮುಖಂಡ ರಾಜಶೇಖರ ತಳವಾರ ಕ್ಯಾಂಪ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದು, ವಿಷಯ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ವಾಲ್ಮೀಕಿ ಸಮಾಜದ ಸಂಘಟನೆಗಳು ಸೋಮವಾರ (ಅ.20) ರಾಜ್ಯವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಿವೆ.


ಹೇಳಿಕೆ ತಿರುಚಲಾಗಿದೆ: ರಮೇಶ ಕತ್ತಿ

ಆರೋಪವನ್ನು ಖಂಡಿಸಿದ ರಮೇಶ ಕತ್ತಿ ಅವರು ಸ್ಪಷ್ಟನೆ ನೀಡುತ್ತಾ, “ಬಿಡಿಸಿಸಿ ಚುನಾವಣೆಯಲ್ಲಿ ಗೆದ್ದ ನಂತರ ಅಭಿಮಾನಿಗಳು ಡಾಲ್ಟಿ ಸಂಗೀತ ಹಚ್ಚಿ ಮೆರವಣಿಗೆ ಮಾಡಲು ಒತ್ತಾಯಿಸಿದರು. ಆಗ ನಾನು ‘ಬ್ಯಾಡರೋ’ (ಬೇಡ) ಎಂದೆ. ಈ ಹೇಳಿಕೆಯನ್ನು ತಿರುಚಿ ಜಾತಿ ನಿಂದನೆ ಎಂದು ವೈರಲ್ ಮಾಡಿದ್ದಾರೆ,” ಎಂದರು.

“ನನ್ನ ಗೆಲುವು ಸಹಿಸಲಾಗದವರು ಉದ್ದೇಶಪೂರ್ವಕವಾಗಿ ನನ್ನನ್ನು ವಾಲ್ಮೀಕಿ ಸಮುದಾಯದ ವಿರೋಧಿ ಎಂಬಂತೆ ಬಿಂಬಿಸಿದ್ದಾರೆ. ನಾನು ಯಾರನ್ನೂ ಉದ್ದೇಶಿಸಿ ಮಾತನಾಡಿಲ್ಲ. ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ,” ಎಂದು ಕತ್ತಿ ಸ್ಪಷ್ಟಪಡಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಗಾಳಿಪಟದ ಮಾಂಜಾ ದಾರ ಬೈಕ್‌ ಚಲಾಯಿಸುತ್ತಿದ್ದ ಯುವಕನ ಕೊರಳಿಗೆ ಸಿಲುಕಿ ಸ್ಥಳದಲ್ಲೇ...

ಬೆಳಗಾವಿ | ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನ ಕೊಲೆ: ನಾಲ್ವರ ಬಂಧನ

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದ್ದು, ಹಳೆ ಹಣಕಾಸಿನ...

ಬೆಳಗಾವಿ | ಮತಕಳ್ಳತನ ಆರೋಪಕ್ಕೆ ಸಾಕ್ಷ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ: ಜಗದೀಶ್ ಶೆಟ್ಟರ್

ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು...