ಬೆಳಗಾವಿ | ಕಬ್ಬಿನ ಎಫ್‌ಆರ್‌ಪಿ ಹೆಚ್ಚಳಕ್ಕೆ ಕೇಂದ್ರ ಕ್ರಮ: ಅ.12ರಂದು ಸಭೆ ನಿರೀಕ್ಷೆ : ಸಂಜಯ ಪಾಟೀಲ

Date:

ಪ್ರಸ್ತುತ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಪ್ರತಿ ಕೆಜಿಗೆ ₹31 ಇದ್ದರೂ, ಕಳೆದ ಕೆಲವು ವರ್ಷಗಳಿಂದ ಸಕ್ಕರೆ ಕಾರ್ಖಾನೆಗಳು ಇದಕ್ಕಿಂತ ಹೆಚ್ಚಿನ ದರದಲ್ಲೇ ಸಕ್ಕರೆ ಮಾರಾಟ ಮಾಡುತ್ತಿವೆ. ಕಳೆದ ವರ್ಷ ₹38ರಿಂದ ₹39 ಹಾಗೂ ಈ ವರ್ಷ ₹40ರಿಂದ ₹47ರವರೆಗೆ ಸಕ್ಕರೆ ಮಾರಾಟವಾಗಿದೆ ಎಂದು ಸಂಜಯ ಪಾಟೀಲ್ ತಿಳಿಸಿದರು.

- Advertisement -

ಕರ್ನಾಟಕದ ಕಬ್ಬು ಬೆಳೆಗಾರರ ಬೇಡಿಕೆಗೆ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಸ್ಪಂದಿಸಿದ್ದು, ಈ ವರ್ಷವೂ ಎಫ್‌ಆರ್‌ಪಿ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ. ಅಕ್ಟೋಬರ್ 12ರಂದು ಈ ಕುರಿತು ಸಭೆ ನಡೆಯುವ ನಿರೀಕ್ಷೆಯಿದ್ದು, ಕಬ್ಬು ಬೆಳೆಗಾರರಿಗೆ ಕೇಂದ್ರದಿಂದ ಸಿಹಿಸುದ್ದಿ ಸಿಗಲಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ರೈತ ಮುಖಂಡರು ದೆಹಲಿಗೆ ತೆರಳಿ ಸಂಬಂಧಪಟ್ಟ ಕೇಂದ್ರ ಸಚಿವಾಲಯಗಳು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ರೈತರ ಬೇಡಿಕೆಗಳನ್ನು ಆಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸ್ಥಿರತೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. 2014ಕ್ಕೂ ಮುನ್ನ ಬಾಕಿ ಉಳಿದಿದ್ದ ₹16,600 ಕೋಟಿ ಕಬ್ಬಿನ ಹಣ ಪಾವತಿಗೆ ಕ್ರಮ ಕೈಗೊಳ್ಳಲಾಗಿದ್ದು, ಕಾರ್ಖಾನೆಗಳಿಂದ ರೈತರಿಗೆ ನೇರವಾಗಿ ಹಣ ಪಾವತಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಸಂಜಯ ಪಾಟೀಲ್ ಹೇಳಿದರು.

2026ರ ಮೇ ತಿಂಗಳಲ್ಲಿ ಪ್ರತಿ ಕ್ವಿಂಟಾಲ್ ಕಬ್ಬಿನ ಎಫ್‌ಆರ್‌ಪಿಯನ್ನು ₹365ಕ್ಕೆ ಹೆಚ್ಚಿಸಲಾಗಿತ್ತು. ಈ ವರ್ಷವೂ ರೈತರ ಹಿತದೃಷ್ಟಿಯಿಂದ ಮತ್ತೊಮ್ಮೆ ಎಫ್‌ಆರ್‌ಪಿ ಹೆಚ್ಚಳ ಮಾಡುವ ನಿರೀಕ್ಷೆಯಿದೆ ಎಂದರು.

ಎಥೆನಾಲ್ ಉತ್ಪಾದನೆಗೆ ಉತ್ತೇಜನ

ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಎಥೆನಾಲ್ ಉತ್ಪಾದನೆ ಮತ್ತು ಖರೀದಿಗೆ ಉತ್ತೇಜನ ನೀಡುತ್ತಿದೆ. ಈ ಹಿಂದೆ 38 ಕೋಟಿ ಲೀಟರ್‌ನಷ್ಟಿದ್ದ ಎಥೆನಾಲ್ ಖರೀದಿ ಪ್ರಮಾಣ ಇದೀಗ 1200 ಕೋಟಿ ಲೀಟರ್‌ಗೆ ಏರಿಕೆಯಾಗಿದೆ ಎಂದು ಹೇಳಿದರು.

ಇದರಿಂದ ಕಬ್ಬು ಬೆಳೆಗಾರರಿಗೆ ಹಣ ಪಾವತಿಯಾಗುವ ಅವಧಿ ಕಡಿಮೆಯಾಗಿದೆ. ಕಳೆದ ವರ್ಷ ಶೇ.99.5ರಷ್ಟು ಹಣ ಪಾವತಿಯಾಗಿದ್ದರೆ, ಈ ವರ್ಷ ಈಗಾಗಲೇ ಶೇ.97ರಷ್ಟು ಪಾವತಿಸಲಾಗಿದೆ ಎಂದು ಸಂಜಯ ಪಾಟೀಲ್ ತಿಳಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ವಿಫಲತೆಯಿಂದ ಕುಗ್ಗದೆ ಯಶಸ್ಸಿನತ್ತ ಸಾಗಿರಿ: ರಾಜ್ಯಪಾಲ ಗೆಹ್ಲೋಟ್

ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದಾಗ ವಿನಯದಿಂದ ಇರಬೇಕು. ಕಷ್ಟಗಳು ಎದುರಾದಾಗ ತಾಳ್ಮೆ ಕಳೆದುಕೊಳ್ಳದೆ,...

ಬೆಳಗಾವಿ | ವಿಟಿಯುನಲ್ಲಿ ಏವಿಯೇಷನ್, ರೈಲ್ವೆ ಎಂಜಿನಿಯರಿಂಗ್ ಕೋರ್ಸ್: ಸಚಿವ ಬಸವರಾಜ ರಾಯರೆಡ್ಡಿ

ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...

ಬೆಳಗಾವಿ | ಬರ ಪರಿಸ್ಥಿತಿ ನಿರ್ವಹಣೆ: ಅಧಿಕಾರಿಗಳಿಂದ ಮಾಹಿತಿ ಪಡೆದ ಡಿಸಿಎಂ ಪರಮೇಶ್ವರ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಉಪಮುಖ್ಯಮಂತ್ರಿ...

ಬೆಳಗಾವಿ ನಗರದಲ್ಲಿ ನಾಳೆ ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಬೃಹತ್‌ ಸಮಾವೇಶ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...