ಬೆಳಗಾವಿ ಜಿಲ್ಲೆಯ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಇಂದು ಮತದಾನ ಪ್ರಾರಂಭವಾಗಿದೆ. ಬಾಪೂಜಿ ಶಿಕ್ಷಣ ಸಂಸ್ಥೆಯಲ್ಲಿ 1ರಿಂದ 67 ಮತಗಟ್ಟೆಗಳಲ್ಲಿ ಹಾಗೂ ಎಸ್. ಹೈಸ್ಕೂಲ್ ಶಿಕ್ಷಣ ಸಂಸ್ಥೆಯಲ್ಲಿ 68ರಿಂದ 122 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ.
ಮತಗಟ್ಟೆ ವೀಕ್ಷಣೆ ವೇಳೆ ಜಾರಕಿಹೊಳಿ ಬೆಂಬಲಿಗರು ಹಾಗೂ ರಮೇಶ್ ಕತ್ತಿ ಬೆಂಬಲಿಗರ ನಡುವೆ ವಾಗ್ವಾದ ನಡೆದಿದೆ. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಚುನಾವಣೆ ಶಾಂತಿಯುತವಾಗಿ ಸಾಗಲು ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ.