ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಜೊತೆಗೆ ರವಿ ಹಂಜ್ (ರವಿ ಹಂಜಗಿಮಠ) ಹಾಗೂ ವಿಶ್ವವಾಣಿ ಟಿವಿ ವಾಹಿನಿಯ ಸಂಪಾದಕರ ವಿರುದ್ಧ ಜಾಗತಿಕ ಲಿಂಗಾಯತ ಮಹಾಸಭಾದ ಕೇಂದ್ರ ಸಮಿತಿ ಹಾಗೂ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಬೆಳಗಾವಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಮಹಾಸಭಾದ ಪದಾಧಿಕಾರಿಗಳು ಡಿಸಿಪಿ ನಾರಾಯಣ ಬರಮನಿ ಹಾಗೂ ಮಾರ್ಕೆಟ್ ಪೊಲೀಸ್ ಠಾಣೆಯ ಪಿಐ ಕಾಲಿಮಿರ್ಚಿ ಅವರಿಗೆ ದೂರು ಸಲ್ಲಿಸಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಹಾಗೂ ಬಸವ ತತ್ವವನ್ನು ಅವಹೇಳನ ಮಾಡುವ ರೀತಿಯಲ್ಲಿ ವಿಚಾರಗಳನ್ನು ಪ್ರಸಾರ ಮಾಡಲಾಯಿತು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಜೊತೆಗೆ, ಲಿಂಗಾಯತ ಧರ್ಮದ ಕುರಿತು ಆಕ್ಷೇಪಾರ್ಹವಾಗಿ ಮಾತನಾಡಿರುವುದು ಮತ್ತು 12ನೇ ಶತಮಾನದ ಶರಣರ ವಿಚಾರಗಳನ್ನು ತಪ್ಪಾಗಿ ಬಿಂಬಿಸಿರುವುದು ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಲಾಗಿದೆ.
ಈ ಸಂಬಂಧ ರವಿ ಹಂಜಗಿಮಠ ಹಾಗೂ ವಿಶ್ವವಾಣಿ ಟಿವಿ ವಾಹಿನಿಯ ಸಂಪಾದಕರು ໖ BNS-299, BNS-196, BNS-353, BNS-356, IT 路-75 8 BNS-1(4) ಅಡಿಯಲ್ಲಿ ಎಫ್‌ಐಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ನ್ಯಾಯವಾದಿ ಬಸವರಾಜ ರೊಟ್ಟಿ, ಪ್ರಧಾನ ಕಾರ್ಯದರ್ಶಿ ಅಶೋಕ ಮಳಗಲಿ, ಪ್ರವೀಣಕುಮಾರ ಚಿಕಲಿ, ಸಾಗರ ಅಕ್ಕಿ ಸೇರಿದಂತೆ ಮಹಾಸಭಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.


