ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಧುಪದಾಳ ಗ್ರಾಮದಲ್ಲಿ ಯ17 ಸಾವಿರ ವಿದ್ಯುತ್ ಬಾಕಿ ಶುಲ್ಕ ಕಟ್ಟಿಲ್ಲವೆಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಬಂದಿದ್ದ ಹೆಸ್ಕಾಂ ಸಿಬ್ಬಂದಿ ಮತ್ತು ಗ್ರಾಹಕರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.
ಗಾಯಗೊಂಡ ಪ್ರಮೋದ ಮಾಳಗೆ, ಸುಭಾನಿ ಜಾಧವ ಅವರು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ವಿದ್ಯುತ್ ಶುಲ್ಕ ಕಟ್ಟದ ಕಾರಣಕ್ಕೆ ಸಂಪರ್ಕ ಕಡಿತಗೊಳಿಸಲು ಹೋದಾಗ, ನೂರುದ್ದೀನ್ ಕೋತ್ವಾಲ್, ಅತನ ಸಹೋದರ ಸದ್ದಾಮ್ ಮತ್ತಿತರರು ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ’ ಎಂದು ಸಿಬ್ಬಂಧಿಗಳು ಘಟಪ್ರಭಾ ಠಾಣೆಯಲ್ಲಿ ಸಿಬ್ಬಂದಿ ದೂರು ದಾಖಲಿಸಿದ್ದಾರೆ
ಹೆಸ್ಕಾಂ ಎಇಇ ಎಸ್.ಪಿ.ವರಾಳೆ ತಹಶೀಲ್ದಾರ್ ಡಾ. ಮೋಹನ ಭಸ್ಮ ಆಸ್ಪತ್ರೆಗೆ ಭೇಟಿ ನೀಡಿ ಸಿಬ್ಬಂದಿ ಆರೋಗ್ಯ ವಿಚಾರಿಸಿ, ‘ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ’ ಎಂದು ಭರವಸೆ ಕೊಟ್ಟಿದ್ದಾರೆ.