ಬೆಳಗಾವಿ : ಹಿಜಾಬ್ ಅವಮಾನ ಖಂಡನೆ: ನಿತೀಶ್ ಕುಮಾರ್ ಕ್ಷಮೆ ಕೇಳಲಿ ಅಥವಾ ರಾಜೀನಾಮೆ ನೀಡಲಿ: ಇನ್ಸಾಫ್ ಕಮಿಟಿ ಆಗ್ರಹ

Date:

ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದ ನೇಮಕಾತಿ ಪತ್ರ ವಿತರಣೆ ಸಮಾರಂಭದಲ್ಲಿ ವೈದ್ಯೆ ನುಸ್ತುತ್ ಪರವಿನ್ ಅವರ ಮುಖದ ಮೇಲಿದ್ದ ಹಿಜಾಬ್ ಅನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಜಗ್ಗಿದ ಘಟನೆಯನ್ನು ಖಂಡಿಸಿ, ಇನ್ಸಾಫ್ ಕಮಿಟಿ ಹಾಗೂ ವಿವಿಧ ಸಂಘಟನೆಗಳು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ತಹಸಿಲ್ದಾರರಿಗೆ ಮನವಿ ಸಲ್ಲಿಸಿದರು.

- Advertisement -

ಮನವಿಯಲ್ಲಿ, ಹಿಜಾಬ್ ಕೇವಲ ಬಟ್ಟೆಯ ತುಂಡಲ್ಲ; ಅದು ನಂಬಿಕೆ, ಗುರುತು ಹಾಗೂ ವೈಯಕ್ತಿಕ ಆಯ್ಕೆ. ಮಹಿಳೆ ಏನು ಧರಿಸಬೇಕು ಎಂಬ ಹಕ್ಕಿನಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುವುದು ಸಂವಿಧಾನದ ಕಲಂ 14, 19, 21 ಮತ್ತು 25ರ ಉಲ್ಲಂಘನೆ ಎಂದು ತಿಳಿಸಲಾಗಿದೆ. ಈ ವಿಷಯ ಅರಿತಿರುವ ಉನ್ನತ ಸ್ಥಾನದಲ್ಲಿರುವ ಮುಖ್ಯಮಂತ್ರಿಯಿಂದ ನಡೆದಿರುವ ಈ ವರ್ತನೆ ಅಸಭ್ಯ ಹಾಗೂ ಗಂಭೀರ ತಪ್ಪು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಅವಮಾನಕರ ಕೃತ್ಯಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ತಕ್ಷಣ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸಂಘಟನೆಗಳು ಒತ್ತಾಯಿಸಿವೆ.

ಒಂದು ಕಾಲದಲ್ಲಿ ಧರ್ಮನಿರಪೇಕ್ಷತೆ ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಿದ್ದ ನಿತಿಶ್ ಕುಮಾರ್ ಈಗ ಬಹುಸಂಖ್ಯಾತವಾದ ಹಾಗೂ ಹೊರಗಿಡುವ ಕಾರ್ಯಸೂಚಿಗೆ ಅನುಗುಣವಾಗಿ ನಡೆದುಕೊಳ್ಳುತ್ತಿರುವುದು ದುರದೃಷ್ಟಕರ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಆಡಳಿತದ ನೆಪದಲ್ಲಿ ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸುವುದು ಸಂವಿಧಾನಬಾಹಿರ ಎಂದು ಸಂಘಟನೆಗಳು ಸ್ಪಷ್ಟಪಡಿಸಿವೆ.

ಈ ಪ್ರಕರಣದ ಕುರಿತು ಬಿಹಾರ ಸರ್ಕಾರದ ಸಚಿವ ಸಂಜಯ ನಿಶಾದ್ ಹಾಗೂ ಬಿಜೆಪಿಯ ನಾಯಕರ ಹೇಳಿಕೆಗಳೂ ಅತ್ಯಂತ ಆಕ್ಷೇಪಾರ್ಹವಾಗಿವೆ ಎಂದು ಮನವಿಯಲ್ಲಿ ಟೀಕಿಸಲಾಗಿದೆ.

ನಿತೀಶ್ ಕುಮಾರ್ ಅವರ ಹಿಂದಿನ ವಿವಾದಾತ್ಮಕ ವರ್ತನೆಗಳು ಸಾರ್ವಜನಿಕ ವಲಯದಲ್ಲಿ ಈಗಾಗಲೇ ಪ್ರಶ್ನೆಗಳನ್ನು ಎಬ್ಬಿಸಿವೆ ಎಂದು ಸಂಘಟನೆಗಳು ತಿಳಿಸಿವೆ.

ಈ ಸಂದರ್ಭದಲ್ಲಿ ಜಿ.ಎಮ್. ಜೈನೆಖಾನ, ಮಹ್ಮದ್ ಶಫಿ ಬೆಣ್ಣೆ, ಶಬೀರ್ ಅಹ್ಮದ್ ಖಾಡ, ಬಿ.ಆರ್. ದೊಡ್ಡಮನಿ, ರಾಜಶೇಖರ ಶೆಲವಡಿ, ಎಸ್.ಬಿ. ಚಿಕ್ಕನರಗುಂದ, ಫೈರೋಜ್ ಪಠಾಣ, ಶಶಿಕಾಂತ ನೆಲ್ಲೂರ, ಸುಲೇಮಾನ ಫೆಂಡಾರಿ, ಎಂ.ಕೆ. ಯಾದವಾಡ, ಸುಭಾಷ್ ಘೋಡಕೆ ಸೇರಿದಂತೆ ಇನ್ಸಾಫ್ ಕಮಿಟಿ ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...