ಬೆಳಗಾವಿ | ಮೊಬೈಲ್ ಬೆಳಕಿನಲ್ಲೇ ಶವಸಂಸ್ಕಾರ: ಸಾಲಾಪೂರ ಗ್ರಾ.ಪಂ ಅಧಿಕಾರಿಗಳ ನಿರ್ಲಕ್ಷ್ಯ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ಸಾರ್ವಜನಿಕ ಸ್ಮಶಾನದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ರಾತ್ರಿ ವೇಳೆ ವಿದ್ಯುತ್ ವ್ಯವಸ್ಥೆ ಇಲ್ಲದ ಕಾರಣ ಮೊಬೈಲ್ ಟಾರ್ಚ್‌ ಬೆಳಕಿನಲ್ಲೇ ಶವಸಂಸ್ಕಾರ ನಡೆಸಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

- Advertisement -

ಸ್ಮಶಾನದಲ್ಲಿ ಕೇವಲ ಒಂದು ವಿದ್ಯುತ್ ದೀಪವಿದ್ದು, ಅದು ಕೂಡ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರ ಜೊತೆಗೆ ಸ್ಮಶಾನದ ಆವರಣದಲ್ಲಿ ಗಿಡಗಂಟಿಗಳು ದಟ್ಟವಾಗಿ ಬೆಳೆದಿದ್ದು, ಅಂತ್ಯಸಂಸ್ಕಾರಕ್ಕೆ ಬರುವವರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಮಳೆಗಾಲದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಮೃತರ ಅಂತಿಮ ವಿಧಿವಿಧಾನಗಳನ್ನು ನಡೆಸುವುದೇ ಸವಾಲಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಈದಿನ.ಕಾಮ್ ಜೊತೆ ಮಾತನಾಡಿದ ಗ್ರಾಮಸ್ಥರು, “ರಾತ್ರಿ ವೇಳೆ ಶವಸಂಸ್ಕಾರ ಮಾಡುವ ಸಂದರ್ಭ ಬಂದರೆ ಮೊಬೈಲ್ ಬೆಳಕನ್ನೇ ಆಶ್ರಯಿಸಬೇಕಾಗಿದೆ. ಸ್ಮಶಾನದಲ್ಲಿ ಸ್ವಚ್ಛತೆ ಇಲ್ಲ, ಗಿಡಗಂಟಿಗಳು ಬೆಳೆದು ದಾರಿ ಕಾಣದಂತಾಗಿದೆ. ಹಲವು ಬಾರಿ ಗ್ರಾಮ ಪಂಚಾಯಿತಿಯ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸ್ಮಶಾನದಲ್ಲಿ ತಕ್ಷಣವೇ ಸಮರ್ಪಕ ವಿದ್ಯುತ್ ದೀಪಗಳನ್ನು ಅಳವಡಿಸಬೇಕು. ಗಿಡಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛತಾ ಕಾರ್ಯ ನಡೆಸಬೇಕು. ಅಂತ್ಯಸಂಸ್ಕಾರದಂತಹ ಸೂಕ್ಷ್ಮ ಸಂದರ್ಭದಲ್ಲಿ ಜನರು ಸಂಕಷ್ಟ ಅನುಭವಿಸದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜವಾಬ್ದಾರಿ ಗ್ರಾಮ ಪಂಚಾಯಿತಿಯ ಮೇಲಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸದಿದ್ದರೆ ಗ್ರಾಮಸ್ಥರ ಆಕ್ರೋಶ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗಳ ಭೀತಿ: ಅಕ್ಟೋಬರ್ 20ರವರೆಗೆ ದೆಹಲಿಯಲ್ಲಿ ‘ಸಿಎಪಿಎಫ್’ಭದ್ರತೆ ವಿಸ್ತರಿಸಲು ಪೊಲೀಸರ ಮನವಿ

ಚುನಾವಣಾ ಆಯೋಗದ (ECI) ಕಾರ್ಯವೈಖರಿ ಮತ್ತು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು...

ಬಸವಕಲ್ಯಾಣ | ಕಿಟ್ಟಾ ಗ್ರಾಮದ 20 ಬಡ ಕುಟುಂಬಗಳಿಗೆ ನಿವೇಶನ ನೀಡಲು ಆಗ್ರಹ

ಬಸವಕಲ್ಯಾಣ ತಾಲ್ಲೂಕಿನ ಕಿಟ್ಟಾ ಗ್ರಾಮದ ಸರ್ವೆ ನಂ. 249ರಲ್ಲಿ ಸುಮಾರು 20...