ಬೆಳಗಾವಿ | ಕೆರೆಗೆ ಕೋಟಿ ಕೋಟಿ ವೆಚ್ಚ: ಅಲೆಮಾರಿಗಳಿಗೆ ಮೂಲಸೌಲಭ್ಯ ಯಾವಾಗ ಶಾಸಕರೆ ?

Date:

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿರುವ ಜೋಡು ಕೆರೆಯನ್ನು ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಯೋಜನೆಯ ಹಿನ್ನೆಲೆಯಲ್ಲಿ ಕೆರೆಯ ಮಧ್ಯದಲ್ಲಿ ಗುಡಿಸಲು ಕಟ್ಟಿಕೊಂಡು ಜೀವನ ನಡೆಸುತ್ತಿದ್ದ 50ಕ್ಕೂ ಹೆಚ್ಚು ಕುಟುಂಬಗಳನ್ನು ಪಟ್ಟಣದಿಂದ ಸುಮಾರು 4 ಕಿಲೋಮೀಟರ್ ದೂರದ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಆದರೆ ಸ್ಥಳಾಂತರಗೊಂಡ ಅಲೆಮಾರಿ ಕುಟುಂಬಗಳು ಮೂಲಭೂತ ಸೌಲಭ್ಯಗಳಿಲ್ಲದೆ ಸಂಕಷ್ಟದ ಬದುಕು ಸಾಗಿಸುತ್ತಿವೆ.

- Advertisement -
1001965833 1

ವರ್ಷಗಳ ಹಿಂದೆ ಜೋಡು ಕೆರೆಗಳ ಮಧ್ಯಭಾಗದಲ್ಲಿ ವಾಸಿಸುತ್ತಿದ್ದ ಅಲೆಮಾರಿ ಸಮುದಾಯದ ಸಮಸ್ಯೆಗಳ ಕುರಿತು ದಿನ.ಕಾಮ್‌ ವರದಿ ಪ್ರಕಟಿಸಿತ್ತು. ಆ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೆ ಇದೀಗ ಕೆರೆ ಅಭಿವೃದ್ಧಿ ಕಾಮಗಾರಿಗಾಗಿ ಅಲ್ಲಿದ್ದ ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಆದರೆ ಅಲೆಮಾರಿಗಳ ಬದುಕು ಮಾತ್ರ ಬದಲಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸ್ಥಳಾಂತರಿತ ಪ್ರದೇಶವು ಕಲ್ಲು ಗಣಿಗಾರಿಕೆ ಪ್ರದೇಶ ಹಾಗೂ ಸ್ಮಶಾನದ ಸಮೀಪದಲ್ಲಿದ್ದು, ಅಲ್ಲಿ ಕುಡಿಯುವ ನೀರು, ಶೌಚಾಲಯ, ರಸ್ತೆ, ಬೀದಿ ದೀಪ ಸೇರಿದಂತೆ ಯಾವುದೇ ಸಮರ್ಪಕ ಮೂಲಸೌಲಭ್ಯಗಳಿಲ್ಲ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಶೌಚಾಲಯದ ಕೊರತೆಯಿಂದ ಮಹಿಳೆಯರು, ಪುರುಷರು ಹಾಗೂ ಮಕ್ಕಳು ಬಯಲನ್ನೇ ಅವಲಂಬಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.

1001965843 1

ಅಲ್ಲದೆ, ಅಲೆಮಾರಿ ಸಮುದಾಯದ ಮಕ್ಕಳಿಗೆ ಶಿಕ್ಷಣ ಮತ್ತು ಪೌಷ್ಟಿಕಾಂಶ ಸೇವೆಗಳು ಸಹ ದೂರವಾಗಿವೆ. ಸ್ಥಳಾಂತರಿತ ಪ್ರದೇಶದಲ್ಲಿ ಅಂಗನವಾಡಿ ಕೇಂದ್ರವಿಲ್ಲದ ಕಾರಣ ಮಕ್ಕಳು ಎರಡು-ಮೂರು ಕಿಲೋಮೀಟರ್ ದೂರ ಸಂಚರಿಸಬೇಕಾಗಿದ್ದು, ಇದರಿಂದ ಅನೇಕ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.

ಜೀವನೋಪಾಯಕ್ಕಾಗಿ ಪಟ್ಟಣವನ್ನೇ ಅವಲಂಬಿಸಿದ್ದ ಕುಟುಂಬಗಳಿಗೆ ಸ್ಥಳಾಂತರದಿಂದ ಉದ್ಯೋಗದ ಮೇಲೂ ಪರಿಣಾಮ ಬಿದ್ದಿದೆ. ಪಟ್ಟಣದಿಂದ ದೂರ ವಾಸಿಸುವುದರಿಂದ ದೈನಂದಿನ ಕೆಲಸಗಳಿಗೆ ತೆರಳುವುದು ಕಷ್ಟಕರವಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.

ಗಮನಾರ್ಹ ಸಂಗತಿಯೆಂದರೆ, ಸರ್ಕಾರವು ಈ ಕುಟುಂಬಗಳಿಗೆ ಕೇವಲ ನಿವೇಶನವನ್ನು ಮಾತ್ರ ಒದಗಿಸಿದ್ದು, ಮನೆಗಳನ್ನು ನಿರ್ಮಿಸಿ ನೀಡಿಲ್ಲ. ಪರಿಣಾಮವಾಗಿ ಹಲವರು ತಾತ್ಕಾಲಿಕ ಗುಡಿಸಲುಗಳಲ್ಲಿ ವಾಸಿಸುತ್ತಿದ್ದಾರೆ. ಸ್ಥಳಾಂತರಗೊಂಡ ಕುಟುಂಬಗಳಿಗೆ ಶಾಶ್ವತ ಮನೆಗಳ ನಿರ್ಮಾಣದ ಜೊತೆಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕೂಡಲೇ ಕಲ್ಪಿಸಬೇಕೆಂದು ನಿವಾಸಿಗಳು ಆಗ್ರಹಿಸಿದ್ದಾರೆ.

ಈ ಕುರಿತು ಈ ದಿನ.ಕಾಮ್ ಜತೆ ಮಾತನಾಡಿದ ಅಲೆಮಾರಿ ಸಮುದಾಯದ ದುರ್ಗಮ್ಮ, ಇಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆಯಿಲ್ಲ. ಕೆಲವೆಡೆ ಮಾತ್ರ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ನಮ್ಮ ಮಕ್ಕಳಿಗೆ ಅಂಗನವಾಡಿ ಸೌಲಭ್ಯವೂ ಇಲ್ಲ. ಸರ್ಕಾರ ಇಲ್ಲಿ ಅಂಗನವಾಡಿ ನಿರ್ಮಿಸಿದರೆ ಮಕ್ಕಳ ಶಿಕ್ಷಣ ಹಾಗೂ ಪೌಷ್ಟಿಕಾಂಶದ ಸಮಸ್ಯೆ ನಿವಾರಣೆಯಾಗಲಿದೆ ಎಂದು ಹೇಳಿದರು.

ಕಾಂಗ್ರೆಸ್‌ ಪಕ್ಷದ ಅಥಣಿ ತಾಲೂಕು ಸಮಿತಿ ಅಧ್ಯಕ್ಷ ಸಿದ್ದಾರ್ಥ ಸಿಂಗೆ ಮಾತನಾಡಿ, ಅಲೆಮಾರಿಗಳ ಅಭಿವೃದ್ಧಿಯ ಬಗ್ಗೆ ಸರ್ಕಾರ ಮಾತನಾಡುತ್ತಿದೆಯಾದರೂ, ಅವರನ್ನು ಸ್ಥಳಾಂತರಿಸಿರುವ ಪ್ರದೇಶದಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳೇ ಇಲ್ಲ. ಮಹಿಳೆಯರು ಇನ್ನೂ ಬಯಲು ಶೌಚವನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ಇದೆ. ಮಕ್ಕಳಿಗೆ ಶಿಕ್ಷಣ ಸೌಲಭ್ಯವೂ ಸಮರ್ಪಕವಾಗಿ ದೊರೆಯುತ್ತಿಲ್ಲ. ತಕ್ಷಣ ಅಂಗನವಾಡಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಸ್ಥಳೀಯ ಶಾಸಕ ಲಕ್ಷ್ಮಣ ಸವದಿಯವರು ಹಾಗೂ ಅಧಿಕಾರಿಗಳು ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಅಥಣಿಯ ಸೌಂದರ್ಯ ಹೆಚ್ಚಿಸಲು ಜೋಡು ಕೆರೆ ಅಭಿವೃದ್ಧಿಪಡಿಸುವುದು ಸ್ವಾಗತಾರ್ಹ. ಆದರೆ ಅಭಿವೃದ್ಧಿಯ ಹೆಸರಿನಲ್ಲಿ ಸ್ಥಳಾಂತರಗೊಂಡ ಅಲೆಮಾರಿ ಕುಟುಂಬಗಳ ಮೂಲಭೂತ ಹಕ್ಕುಗಳು ನಿರ್ಲಕ್ಷ್ಯಕ್ಕೆ ಒಳಗಾಗಬಾರದು. ಅವರಿಗೆ ವಸತಿ, ಕುಡಿಯುವ ನೀರು, ರಸ್ತೆ, ಶೌಚಾಲಯ, ಅಂಗನವಾಡಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಅಭಿವೃದ್ಧಿ ಮತ್ತು ಮಾನವೀಯತೆ ಎರಡಕ್ಕೂ ಸಮಾನ ಆದ್ಯತೆ ನೀಡಬೇಕಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮಲಪ್ರಭಾ ಜಲಾಶಯದಿಂದ ಸವದತ್ತಿ ಕೆರೆಗಳಿಗೆ ನೀರು ಬಿಡಿ: ಶಾಸಕ ವಿಶ್ವಾಸ ವೈದ್ಯ

ಮಲಪ್ರಭಾ ಅಣೆಕಟ್ಟಿನಿಂದ ಬೆಳಗಾವಿ ಜಿಲ್ಲೆಯ ಸವದತ್ತಿ ಭಾಗದ ಕೆರೆಗಳನ್ನು ತುಂಬಿಸಲು ಅಗತ್ಯ...

ಬೆಳಗಾವಿ | ಸೋಯಾಬಿನ್ ಬೆಳೆ ಸಮೀಕ್ಷೆ ನಡೆಸಿ: ಶಾಸಕ ಮಹಾಂತೇಶ ಕೌಜಲಗಿ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಯಾಬಿನ್ ಬೆಳೆಯಲಾಗಿದ್ದು, ಮಳೆ...

ಬೆಳಗಾವಿ | ಜೂನ್‌ವರೆಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಕ್ರಮ: ಸಚಿವ ಸತೀಶ ಜಾರಕಿಹೊಳಿ

ಮುಂದಿನ ಜೂನ್‌ವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ...